Breaking News

ಡ್ರಗ್ಸ್ ಪ್ರಕರಣ ಸಂಬಂಧ ರಾಜ್ಯದಲ್ಲಿ 200 ಮಂದಿ ವಿದೇಶಿಗರ ಮೇಲೆ ಕ್ರಮ: ಪರಮೇಶ್ವರ್

Spread the love

ತುಮಕೂರು: ಡ್ರಗ್ಸ್ ಬಳಕೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇತ್ತೀಚೆಗೆ ಸುಮಾರು 200 ಮಂದಿ ವಿದೇಶಿಗರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ತುಮಕೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹಲವು ದಿನಗಳಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಕೆಜಿ ಗಟ್ಟಲೆ ಡ್ರಗ್ಸ್ ಅನ್ನು ಈಗಾಗಲೇ ವಶಕ್ಕೆ ಪಡೆದು ಸುಟ್ಟು ಹಾಕಿದ್ದೇವೆ. ಬಹಳ ಕಡೆ ಶಿಕ್ಷೆ ಕೂಡ ಪ್ರಕಟವಾಗಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ಇರಬಹುದು ಅಥವಾ ರಾಜ್ಯದ ಯಾವುದೇ ಭಾಗದಲ್ಲಿಯಾದರೂ ವ್ಹೀಲಿಂಗ್​ ಮಾಡುವ ಬಗ್ಗೆ ಪೊಲೀಸ್ ಇಲಾಖೆ ಕಠಿಣವಾಗಿ ಕ್ರಮ ತೆಗೆದುಕೊಳ್ಳಲಿದೆ. ಅಲ್ಲದೇ ರಾಜ್ಯದಲ್ಲಿ ಡ್ರಗ್ಸ್ ಬಳಕೆ ಮತ್ತು ಮಾರಾಟ ನಿಲ್ಲಿಸಲಾಗಿದೆ ಅಂತ ಡಿಕ್ಲೇರ್ ಮಾಡಿದ್ದೇವೆ ಎಂದರು.

ಈ ಬಗ್ಗೆ ಸಂಬಂಧಪಟ್ಟ ಎಂಬೆಸ್ಸಿಗಳಿಗೆ ಕೂಡ ಮಾಹಿತಿ ನೀಡಲಾಗಿದೆ. ಅನೇಕ ಮಂದಿ ವಿದೇಶಿ ವಿದ್ಯಾರ್ಥಿಗಳು ವೀಸಾ ಪಡೆದು ಇಲ್ಲಿಗೆ ಬರುತ್ತಿದ್ದಾರೆ. ವೀಸಾ ಅವಧಿ ಮುಗಿದರೂ ಇಲ್ಲಿಯೇ ಇರುತ್ತಿರುವ ಮಾಹಿತಿ ಲಭ್ಯವಾಗಿದೆ. ಅವರನ್ನು ಪತ್ತೆ ಹಚ್ಚಿ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ