Breaking News

ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವುದರ ಜತೆಗೆ ಶಾಲೆಯಲ್ಲಿ ಪರೀಕ್ಷಾ ಸ್ನೇಹಿ ಪರಿಸರ ನಿರ್ಮಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

Spread the love

ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವುದರ ಜತೆಗೆ ಶಾಲೆಯಲ್ಲಿ ಪರೀಕ್ಷಾ ಸ್ನೇಹಿ ಪರಿಸರ ನಿರ್ಮಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು
ವಿದ್ಯಾರ್ಥಿ ಜೀವನದಲ್ಲಿ ಎಸ್ಎಸ್ಎಲ್ಸಿ ಒಂದು ಮಹತ್ವದ ಘಟ್ಟ. ಮಕ್ಕಳಲ್ಲಿ ಸಮರ್ಥವಾಗಿ ಮತ್ತು ಸಮರ್ಪಕವಾಗಿ ಎದುರಿಸುವ ಆತ್ಮವಿಶ್ವಾಸ ಮೂಡಿಸಬೇಕು. ಮತ್ತು ಶಾಲೆಯಲ್ಲಿ ಮಕ್ಕಳು ಪರೀಕ್ಷೆಯ ಬಗ್ಗೆ ಗೊಂದಲ, ಭಯ ಇಲ್ಲದೇ ಪರೀಕ್ಷೆಗಳನ್ನು ಬರೆಯುವ ಪರೀಕ್ಷಾಸ್ನೇಹಿ ಪರಿಸರ ನಿರ್ಮಾಣವಾಗಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ಕಳೆದ ಶುಕ್ರವಾರ ಸಂಜೆ ಕಲಘಟಗಿ ತಾಲೂಕಿನ ದಾಸ್ತಿಕೊಪ್ಪ ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ಮಿಶನ್ ವಿದ್ಯಾಕಾಶಿ ಯೋಜನೆಯಡಿ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಪಲಿತಾಂಶ ಹಾಗೂ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ತಾಲೂಕಿನ ವಿವಿಧ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರ, ಎಸ್ಡಿಎಂಸಿ ಅಧ್ಯಕ್ಷರ, ಪಾಲಕರ ಸಭೆ ಮತ್ತು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿದ್ಯಾರ್ಥಿ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರವು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿ, ಸಾಕಷ್ಟು ಅನುದಾನವನ್ನು ಮತ್ತು ವಿನೂತನ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ.
ಶಿಕ್ಷಕರಿಗೆ ವೇತನ, ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ಪೂರೈಸುತ್ತಿದೆ. ಆದರೂ ನಿರೀಕ್ಷಿತ ಮಟ್ಟದಲ್ಲಿ ಶೈಕ್ಷಣಿ ಸುಧಾರಣೆ ಹಾಗೂ ಬೋಧನಾ ಗುಣ್ಣಮಟ್ಟ ಸುದ್ದಾರಿಸುತ್ತಿಲ್ಲ.
ಈ ಕುರಿತು ಶಿಕ್ಷಕರು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ. ಶಿಕ್ಷಕರು ಶಾಲೆಯ ಪ್ರತಿ ಮಗುವನ್ನು ತಮ್ಮ ಸ್ವಂತ ಮಕ್ಕಳಂತೆ ಕಾಣಬೇಕು. ನನ್ನ ಶಾಲೆ-ನನ್ನ ಮಕ್ಕಳು ಎಂಬ ಅಭಿಮಾನದಿಂದ ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಪ್ರ್ರಾಮಾಣಿಕ ಪ್ರಯತ್ನ ಮಾಡಬೇಕೆಂದು‌ಕರೆ ನೀಡಿದರು. ಜತೆಗೆ ಮಕ್ಕಳ ಮೂಲಭೂತ ಶಿಕ್ಷಣಕ್ಕೆ ಆದ್ಯತೆ ನೀಡಬೇಕು.
ಪ್ರಾಥಮಿಕ ಹಂತದಿಂದ ಪ್ರತಿ ಮಗು ನಿಗದಿಪಡಿಸಿದ ಶೈಕ್ಷಣಿಕ ಸಾಧನೆ ಮಾಡಬೇಕು ಮತ್ತು ಉತ್ತಮ್ಮ ರೀತಿಯಲ್ಲಿ ಓದು ಬರಹ ಕಲಿಯಬೇಕು.
ಈ ಕರ್ತವ್ಯ ನಿರ್ವಹಣೆಯಲ್ಲಿ ಶಿಕ್ಷಕರು ಮತ್ತು ಪಾಲಕರು ಜಂಟಿಯಾಗಿ ಪಾತ್ರ ನಿರ್ವಹಿಸಬೇಕು. ಅಂದಾಗ ನಾವು ನಿರೀಕ್ಷಿತ ಗುರಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ