Breaking News

ನಂದಗಡ ಮಹಾಲಕ್ಷ್ಮೀಯ ದರ್ಶನ ಪಡೆದ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಡಾ. ಸೋನಾಲಿ ಸರ್ನೋಬತ್

Spread the love

ನಂದಗಡ ಮಹಾಲಕ್ಷ್ಮೀಯ ದರ್ಶನ ಪಡೆದ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಡಾ. ಸೋನಾಲಿ ಸರ್ನೋಬತ್
ಖಾನಾಪೂರ ತಾಲೂಕಿನ ನಂದಗಡದಲ್ಲಿ ನಡೆಯುತ್ತಿರುವ ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀ ಯಾತ್ರೆಯ ನಿಮಿತ್ಯ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಡಾ. ಸೋನಾಲಿ ಸರ್ನೋಬತ್ ಸೇರಿದಂತೆ ಬಿಜೆಪಿಯ ಸದಸ್ಯರು ದೇವಿಯ ದರ್ಶನ ಪಡೆದರು.
ಖಾನಾಪೂರ ತಾಲೂಕಿನ ನಂದಗಡದಲ್ಲಿ 24 ವರ್ಷಗಳ ಬಳಿಕ ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀದೇವಿಯ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಈ ಹಿನ್ನೆಲೆ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಡಾ. ಸೋನಾಲಿ ಸರ್ನೋಬತ್ ಅವರು ದೇವಿಯ ದರ್ಶನ ಪಡೆದರು.
ಈ ವೇಳ ಜಾತ್ರಾ ಸಮಿತಿಯ ಪ್ರಶಾಂತ ಲಕ್ಕೆಬೈಲಕರ, ಪುಂಡಲೀಕ ಕರಳಗೇಕರ, ಸುಬಾಷ ಪಾಟೀಲ, ಸೇರಿದಂತೆ ಇನ್ನುಳಿದವರು ಅವರನ್ನು ಸ್ವಾಗತಿಸಿ ಸತ್ಕರಿಸಿದರು.
ಈ ಸಂದರ್ಭದಲ್ಲಿ ಗೀತಾಂಜಲಿ ಚೌಗುಲೆ, ಕಾಂಚನ್ ಚೌಗುಲೆ, ದೀಪಾಲಿ ಮಲ್ಕಾರಿ, ಆಶಾರಾಣಿ ನಿಂಬಾಳ್ಕರ್, ನಮ್ರತಾ ಹುಂಡಾರೆ, ಜೀಜಾ ರಾಠೋಳೆ, ರಾಜಶ್ರೀ ಅಜಗಾಂವಕರ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ