Breaking News

ಅಂಗನವಾಡಿ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ

Spread the love

ಅಂಗನವಾಡಿ ಶಿಕ್ಷಣದಲ್ಲಿ ಬದಲಾವಣೆ ತರುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್: ಮೃಣಾಲ ಹೆಬ್ಬಾಳಕರ್
ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ‌ ಗ್ರಾಮದಲ್ಲಿ ಎರಡು ಅಂಗನವಾಡಿ ಕೇಂದ್ರಗಳ ನೂತನ ಕಟ್ಟಡ ಕಾಮಗಾರಿಗೆ ಸ್ಥಳೀಯ ಜನ ಪ್ರತಿನಿಧಿಗಳೊಂದಿಗೆ ಸೇರಿ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಲಕ್ಷ್ಮೀ ಹೆಬ್ಬಾಳಕರ್ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ನಂತರದಲ್ಲಿ ಅಂಗನವಾಡಿ ಶಿಕ್ಷಣದಲ್ಲಿ ಹಲವಾರು ಸಾಕಷ್ಟು ಬದಲಾವಣೆಗಳನ್ನು ತರುತ್ತಿದ್ದಾರೆ. ಸಾವಿರಾರು ನೂತನ ಕಟ್ಟಡ ನಿರ್ಮಿಸಲಾಗುತ್ತಿದೆ. ಗವರ್ಮೆಂಟ್ ಮಾಂಟೆಸ್ಸರಿ ಆರಂಭಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮಾದರಿ ಅಂಗನವಾಡಿಗಳು ತಲೆ ಎತ್ತಲಿವೆ ಎಂದು ಮೃಣಾಲ ಹೆಬ್ಬಾಳಕರ್ ತಿಳಿಸಿದರು.
ಪ್ರತಿಯೊಬ್ಬರೂ ತಮ್ಮ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಶಿಕ್ಷಣದ ವಿಷಯದಲ್ಲಿ ಯಾರೂ ನಿರ್ಲಕ್ಷ್ಯ ತೋರಬಾರದು. ಗ್ರಾಮೀಣ ಕ್ಷೇತ್ರದಲ್ಲಿ ಶೈಕ್ಷಣಿಕ ಮೂಲಸೌಕರ್ಯ ನಿರ್ಮಾಣಕ್ಕೆ ಸಕಲ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಈ ವೇಳೆ ಗ್ರಾಮದ ಮುಖಂಡರು, ಸಿಡಿಪಿಒ‌ ಸುಮಿತ್ರಾ, ಗ್ರಾಮಸ್ಥರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ