ಹುಬ್ಬಳ್ಳಿ, ಫೆಬ್ರವರಿ 23: ಶ್ರೀ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದ (Hubballi Railway Station) 4ನೇ ಪ್ಲಾಟ್ಫಾರ್ಮ್ನಲ್ಲಿ 4 ಲಕ್ಷ ರೂಪಾಯಿ ಮೌಲ್ಯದ 4 ಕೆಜಿ ಗಾಂಜಾ (Ganja) ಪತ್ತೆಯಾಗಿದೆ.
ವಾರಸುದಾರರಿಲ್ಲದ ಬ್ಯಾಗ್ವೊಂದರಲ್ಲಿ 4 ಕೆಜಿ ಗಾಂಜಾ ಪತ್ತೆಯಾಗಿದ್ದು, ಅಬಕಾರಿ ಉಪನಿರೀಕ್ಷಕ ಐ.ಡಿ.ಕಿತ್ತೂರು ಗಾಂಜಾ ಜಪ್ತಿ ಮಾಡಿದ್ದಾರೆ. ರೈಲಿನ ಮೂಲಕ ಹುಬ್ಬಳ್ಳಿಗೆ ಗಾಂಜಾ ತಂದಿರುವ ಶಂಕೆ ವ್ಯಕ್ತವಾಗಿದೆ.
ಗಾಂಜಾ ತಂದಿದ್ದ ಅಪರಿಚಿತ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Laxmi News 24×7