Breaking News

ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ, ಇಬ್ಬರ ವೈಯಕ್ತಿಕ ಜಗಳ,ಇದಕ್ಕೆ ಕನ್ನಡ-ಮರಾಠಿ ಬಣ್ಣ ಬಳಿಯಬಾರದು: ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ (ಫೆ.25): ಭಾಷಾ ಸಂಘರ್ಷದಿಂದ ಶಾಂತಿ, ನೆಮ್ಮದಿ, ಉದ್ಯೋಗಕ್ಕೆ ಸಮಸ್ಯೆಯಾಗಲಿದೆ. ಕಾನೂನು ಸುವ್ಯವಸ್ಥೆ, ಶಾಂತಿ ಸೌಹಾರ್ದತೆ ಕಾಪಾಡಬೇಕಿದೆ. ಗಡಿಭಾಷೆ ಸಂಘರ್ಷ ಮರುಕಳಿಸದಂತೆ ಸರ್ಕಾರ ಎಲ್ಲಾ ರೀತಿ ಕ್ರಮಕೈಗೊಳ್ಳಲಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ನಗರದ ಕಾಂಗ್ರೆಸ್‌ ಭವನದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸ್ ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣ ಇದು ಇಬ್ಬರ ವೈಯಕ್ತಿಕ ಜಗಳವಾಗಿದ್ದು, ಇದಕ್ಕೆ ಕನ್ನಡ-ಮರಾಠಿ ಬಣ್ಣ ಬಳಿಯಬಾರದು. ಇದರಿಂದ ಬೆಳಗಾವಿ ಅಭಿವೃದ್ಧಿಗೆ ಪೆಟ್ಟು ಬೀಳುತ್ತದೆ ಎಂದರು.

ಬಸ್ ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಿಂದ ಮಾಹಿತಿ ಪಡೆಯಲಾಗಿದೆ. ಇದು ಇಬ್ಬರ ವೈಯಕ್ತಿಕ ಜಗಳ, ಭಾಷೆಗೆ ಇದು ವರ್ಗವಾಗಬಾರದು ಎಂಬುದು ನಮ್ಮ ಮನವಿ. ಕನ್ನಡ, ಮರಾಠಿ ಸಂಘಟನೆ ಎಂದು ಬಿಂಬಿಸಬಾರದು. ಅಂತಿಮವಾಗಿ ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ಪೆಟ್ಟು ಬಿಳಲಿದೆ. ಪೊಲೀಸ್ ಇಲಾಖೆ ತನಿಖೆ ಮಾಡುತ್ತಿದ್ದಾರೆ. ಪೋಕ್ಸೋ ಕೇಸ್ ದಾಖಲು ಆಗಬಾರದಿತ್ತು. ಆದರೂ ಪೊಲೀಸರಿಂದ ತಪ್ಪಾಗಿದೆ. ಇದನ್ನು ಸರಿಪಡಿಸಲು ಅವಕಾಶವಿದೆ. ಮರು ಪರಿಶೀಲನೆ ಆಗಬೇಕಿದೆ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ