ಬೆಂಗಳೂರು, (ಫೆಬ್ರವರಿ 24): ಸಾರ್ವಜನಿಕರ ರಕ್ಷಣೆ ಹಾಗೂ ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡುವುದೇ ಪೊಲೀಸರ ಕರ್ತವ್ಯ. ಆದ್ರೆ, ಬೇಲಿಯೇ ಎದ್ದು ಹೊಲ ಮೇಯ್ದಂತೆ ದೂರು ನೀಡಲು ಬಂದಿದ್ದ ಅಪ್ರಾಪ್ತೆ ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ.
ದೂರು ನೀಡಲು ಠಾಣೆಗೆ ಬಂದ ಅಪ್ರಾಪ್ತೆ ವಯಸ್ಸಿನ ಹುಡುಗಿಗೆ ಸಹಾಯ ಮಾಡುವ ನೆಪದಲ್ಲಿ ಆಕೆಯನ್ನು ಲೈಂಗಿಕವಾಗಿ ಬಳಿಸಿಕೊಂಡಿದ್ದಾನೆ ಎಂದು ಬೊಮ್ಮನಹಳ್ಳಿ ಠಾಣೆಯ ಕಾನ್ ಸ್ಟೇಬಲ್ ಅರುಣ್ ವಿರುದ್ಧ ಗಂಭೀರ ಆರೋಪ ಬಂದಿದ್ದು, ಈ ಸಂಬಂಧ ಬೊಮ್ಮನಹಳ್ಳಿ ಪೊಲೀಸರು, ಕಾನ್ಸ್ಟೇಬಲ್ ಸೇರಿ ಇಬ್ಬರನ್ನ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆತಮಗಾದ ಅನ್ಯಾಯ ಬಗ್ಗೆ ಬಾಲಕಿ ಹಾಗೂ ಬಾಲಕಿ ತಾಯಿ ದೂರು ನೀಡಲು ಠಾಣೆಗೆ ಹೋಗಿದ್ದು, ಬೊಮ್ಮನಹಳ್ಳಿ ಪೋಲಿಸ್ ಠಾಣಾ ಪೇದೆ ಬಾಲಕಿಯ ನಂಬರ್ ಪಡೆದು ಆಕೆಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಅತ್ಯಾಚಾರ ವೆಸಗಿದ್ದಾನೆಂದು ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಬಗ್ಗೆ ದೂರು ದಾಖಲಾಗಿದ್ದು, ಆರೋಪಿಗಳಾದ ಪೇದೆ ಅರುಣ್ ಹಾಗೂ ವಿಕ್ಕಿ ಎಂಬುವ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
17 ವರ್ಷದ ಸಂತ್ರಸ್ಥೆ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದಳು. ಈ ವೇಳೆ ನೆರೆಮನೆ ನಿವಾಸಿ ವಿವಾಹಿತ ವ್ಯಕ್ತಿಯ ಪರಿಚಯವಾಗಿದೆ. ಬಳಿಕ ಪ್ರೀತಿಸಿ ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ಆತ್ಯಾಚಾರವೆಸಗಿ ಹಲ್ಲೆ ಮಾಡಿದ್ದಾನೆ. ಇದರಿಂದ ನೊಂದ ಅಪ್ರಾಪ್ತೆ, ತಾಯಿ ಬಳಿ ಹೇಳಿಕೊಂಡಿದ್ದಳು. ಈ ಸಂಬಂಧ ಸಂತ್ರಸ್ತೆ ತಾಯಿ ಬೊಮ್ಮನಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು. ಆದ್ರೆ, ದೂರು ನೀಡಲು ಬಂದಿದ್ದ ಸಂತ್ರಸ್ತೆಯನ್ನ ಕಾನ್ ಸ್ಟೇಬಲ್ ಅರುಣ್ ಪರಿಚಯಿಸಿ ಕೊಂಡಿದ್ದು, ನ್ಯಾಯಕೊಡಿಸುವುದಾಗಿ ಭರವಸೆ ನೀಡಿದ್ದಾನೆ. ಅಲ್ಲದೇ ಅಲ್ಲದೆ ಕೆಲಸ ಕೊಡಿಸುವುದಾಗಿ ನಂಬಿಸಿದ್ದಾನೆ.
Laxmi News 24×7