Breaking News

ಬೆಳಗಾವಿಯಲ್ಲಿ ಮತ್ತೆ ಮರಾಠಿ ಯುವಕರ ಗೂಂಡಾಗಿರಿ: ಕರವೇ ತಾಲೂಕು ಉಪಾಧ್ಯಕ್ಷನಿಗೆ ಥಳಿತ

Spread the love

ಬೆಳಗಾವಿ, (ಫೆಬ್ರವರಿ 24): ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಬೆಳಗಾವಿಯಲ್ಲಿ ಮರಾಠಿ ಪುಂಡರು ಕರ್ನಾಟಕ ಬಸ್​ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿಯಲ್ಲಿ ಬೂದಿ ಮುಚ್ಚಿದ ಕೆಂಡಂತಿದೆ. ಇದರ ಬೆನ್ನಲ್ಲೇ ಇದೀಗ ಬೆಳಗಾವಿಯಲ್ಲಿ ಮತ್ತೆ ಮರಾಠಿ ಯುವಕರ ಗೂಂಡಾಗಿರಿ ಮುಂದುವರೆದಿದ್ದು, ಕನ್ನಡ ಮಾತಾಡಿದ್ದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ತಾಲೂಕು ಉಪಾಧ್ಯಕ್ಷನಿಗೆ ಥಳಿಸಿರುವ ಘಟನೆ ನಡೆದಿದೆ. ಖಾನಾಪುರ ತಾಲೂಕು ಕರವೇ ನಾರಾಯಣ ಗೌಡ ಬಣದ ಉಪಾಧ್ಯಕ್ಷ ಜಯವಂತ ನಿಡಗಲ್ಕರ್ ಮೇಲೆ ಹಲ್ಲೆ ಮಾಡಲಾಗಿದೆ.

ಕನ್ನಡ ಮಾತಾಡಿದ್ದಕ್ಕೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಕ್ರಾಸ್ ಬಳಿಯ ಹೊಟೇಲ್ ನಲ್ಲಿ ಗಲಾಟೆ ನಡೆದಿದ್ದು, ಈ ವೇಳೆ ಖಾನಾಪುರ ತಾಲೂಕು ಕರವೇ ನಾರಾಯಣ ಗೌಡ ಬಣದ ಉಪಾಧ್ಯಕ್ಷ ಜಯವಂತ ನಿಡಗಲ್ಕರ್ ಅವರ ಮೇಲೆ ಮಾರಾಠಿ ಯುವರು ರಕ್ತ ಬರುವಂತೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ತಕ್ಷಣವೇ ಗಾಯಗೊಂಡ ಕರವೇ ಮುಖಂಡನನ್ನ‌ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕಂಡಕ್ಟರ್​ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಶಿವಸೇನೆ ಪುಂಡರ ಅಟ್ಟಹಾಸ ಜೋರಾಗಿದೆ. ಕರ್ನಾಟಕದ ಬಸ್​ಗಳನ್ನೇ ಟಾರ್ಗೆಟ್​ ಮಾಡುತ್ತಿರುವ ಶಿವಸೇನೆ ಗೂಂಡಾಗಳು,, ಚಾಲಕರ ಮೇಲೆ ದರ್ಪ ಮೆರೆಯುತ್ತಿದ್ದಾರೆ.. ಇಂದು ಒಂದೇ ದಿನ ಎರಡು ಬಾರಿ ಉದ್ಧಟನ ತೋರಿದ್ದಾರೆ.. ಬೆಳಗ್ಗೆ ಬಸ್​ಗಳಿಗೆ ಕಪ್ಪು ಮಸಿ ಬಳಿದು, ಬೋರ್ಡ್ ಒಡೆದು ಹಾಕಿದ್ದ ಪ್ರಕರಣ ಇನ್ನು ಹಸಿ ಹಸಿ ಆಗಿದೆ.. ಹೀಗಿರುವಾಗ ಮಧ್ಯಾಹ್ನದ ಹೊತ್ತಿಗೆ ಸೊಲ್ಲಾಪುರ ಪಟ್ಟಣದಲ್ಲಿ ಶಿವಸೇನೆ ಪುಂಡರು ರಾಜ್ಯದ ಸಾರಿಗೆ ಬಸ್​​ ಮೇಲೆ ಕೇಸರಿ ಕಲರ್​ನಲ್ಲಿ ಜೈ ಮಹಾರಾಷ್ಟ್ರ ಎಂದು ಬರೆದಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ