ಬೆಂಗಳೂರು: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ಗಣನೀಯವಾಗಿ ಪರಿಶಿಷ್ಠರಿಗೆ ಮೀಸಲಿಟ್ಟ ಅನುದಾನ ಬಳಕೆ ಮಾಡಲಾಗುತ್ತಿದೆ. ಗ್ಯಾರಂಟಿಗಳಿಗೆ ಬಹುಪಾಲು ಹಣ ಬಳಕೆಯಾಗುತ್ತಿರುವುದು ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಹಣ. ಈ ಸಂಬಂಧ ವಿಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಅಷ್ಟಕ್ಕೂ ಈವರೆಗೆ ರಾಜ್ಯ ಸರ್ಕಾರ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುದಾನದಿಂದ ಪಂಚ ಗ್ಯಾರಂಟಿಗಳಿಗಾಗಿ ಹಣ ಬಿಡುಗಡೆ ಮಾಡಿದ್ದೆಷ್ಟು ಎಂಬ ಸಮಗ್ರ ವರದಿ ಇಲ್ಲಿದೆ.
ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಸಿದ್ದರಾಮಯ್ಯ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ (ಎಸ್ಸಿಎಸ್ಪಿ ಮತ್ತು ಟಿಎಸ್ಪಿ) ಅನುದಾನ ಬಳಕೆ ಮಾಡುತ್ತಿರುವ ಬಗ್ಗೆ ಪ್ರತಿಪಕ್ಷ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ತೀವ್ರ ವಿರೋಧದ ಮಧ್ಯೆಯೂ ಸರ್ಕಾರ ಈಗಾಗಲೇ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುದಾನದಿಂದ ಪಂಚ ಗ್ಯಾರಂಟಿಗಳಿಗಾಗಿ ಹಣ ಬಿಡುಗಡೆ ಮಾಡುತ್ತಿದೆ. ಸಿದ್ದರಾಮಯ್ಯ ಸರ್ಕಾರ ತೀವ್ರ ಕಸರತ್ತಿನೊಂದಿಗೆ ಪಂಚ ಗ್ಯಾರಂಟಿಗಳಿಗೆ ಹಣ ನಿರ್ವಹಣೆ ಮಾಡುತ್ತಿದೆ. 2024 – 25 ಸಾಲಿನಲ್ಲಿನ ಗ್ಯಾರಂಟಿಗಳಿಗಾಗಿ ಸುಮಾರು 52,000 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ.
Laxmi News 24×7