Breaking News

ಎಸ್ ಬಿಐ ಎಟಿಎಂ ಕಳ್ಳತನ ಸಿಸಿ ಟಿವಿಯಲ್ಲಿ ಕಳ್ಳರ ಕೈಚಳಕ ಸೆರೆ

Spread the love

ಬೆಳಗಾವಿ ಸಾಂಬ್ರಾ ಗ್ರಾಮದಲ್ಲಿ ಎಸ್ ಬಿಐ ಎಟಿಎಂ ಕಳ್ಳತನವಾಗಿದೆ. ಇದರಲ್ಲಿ 75,600 ರೂ. ಕಳ್ಳತನವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಹೇಳಿದರು.
ಬುಧವಾರ ಸಾಂಬ್ರಾ ಗ್ರಾಮದಲ್ಲಿ ಎಟಿಎಂ ಕಳ್ಳತನವಾದ ಜಾಗವನ್ನು ಪರಿಶೀಲನೆ ನಡೆಸಿ, ಸಿಸಿ ಕ್ಯಾಮರಾ ತಪಾಸಣೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಸಿಸಿ ಟಿವಿಯಲ್ಲಿ ಕಳ್ಳರ ಕೈಚಳಕ ಸೆರೆಯಾಗಿದೆ.
ಮುಖಕ್ಕೆ ಮಾಸ್ಕ್ ಧರಿಸಿ ಮೂವರು ಕಳ್ಳತನ ಮಾಡಿರುವ ದೃಶ್ಯ ಸೆರೆಯಾಗಿದೆ. ಇದೇ ರೀತಿ ಕೆಲ ಕಡೆಗಳಲ್ಲಿ ಆಗಿದೆ. ಕಳ್ಳರನ್ನು ಪತ್ತೆ ಹಚ್ಚಲು ಮೂರು ಪೊಲೀಸ್ ವಿಶೇಷ ತಂಡ ರಚನೆ ಮಾಡಲಾಗುವುದು ಎಂದರು.
ಬ್ಯಾಂಕ್ ಸಿಬ್ಬಂದಿಗಳು ಸೆಕ್ಯೂರಿಟಿ ಹಾಕಬೇಕಿತ್ತು. ಇದು ಅವರ ನಿರ್ಲಕ್ಷ್ಯ. ಇದನ್ನು ಐದು ನಿಮಿಷದಲ್ಲಿ ಕಳ್ಳತನ ಮಾಡಿದ್ದಾರೆ.
ಆರೋಪಿ ಯಾರಿದ್ದಾರೆ. ಎಲ್ಲಿಂದ ಬಂದಿದ್ದಾರೆ ಎನ್ನುವುದು ಗೊತ್ತಿಲ್ಲ ಆರೋಪಿಗಳ ಸುಳಿವು ಸಿಕ್ಕಿದ್ದು ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು ಎಂದರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ