ಹುಬ್ಬಳ್ಳಿ, ಫೆಬ್ರವರಿ 27: ಹುಬ್ಬಳ್ಳಿಯ ಕಂಚಗಾರ ಗಲ್ಲಿಯಲ್ಲಿರುವ ಎನ್ಆರ್ ಸಾರಿ ಸೆಂಟರ್ನಲ್ಲೊಂದು ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಗ್ರಾಹಕರಿಗೆ ಬಟ್ಟೆ ತೋರಿಸುತ್ತಿದ್ದಾಗಲೇ ಬಟ್ಟೆ ಅಂಗಡಿ ಸಿಬ್ಬಂದಿಗೆ ಹೃದಯಾಘಾತವಾಗಿದೆ. ಪರಿಣಾಮವಾಗಿ ಆ ಸಿಬ್ಬಂದಿ ಮೃತಪಟ್ಟಿದ್ದಾರೆ. ಸಿಬ್ಬಂದಿ ಹೃದಯಾಘಾತದಿಂದ ನರಳಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮೃತರನ್ನು 43 ವರ್ಷ ವಯಸ್ಸಿನ ಭವರ್ ಸಿಂಗ್ ಎಂದು ಗುರುತಿಸಲಾಗಿದೆ.
ಇವರು ಮೂಲತಃ ರಾಜಸ್ಥಾನದವರಾಗಿದ್ದಾರೆ. ಇದೇ ತಿಂಗಳು 22 ರಂದು ಘಟನೆ ಸಂಭವಿಸಿದ್ದು, ಸದ್ಯ ಅದಕ್ಕೆ ಸಂಬಂಧಿಸಿದ ವಿಡಿಯೋ ಬಹಿರಂಗವಾಗಿದೆ.
Laxmi News 24×7