Breaking News

ವಸತಿ ಸೌಲಭ್ಯ ನೀಡಿ : ಲಿಂಗತ್ವ ಅಲ್ಪಸಂಖ್ಯಾತರಿಂದ ಸರ್ಕಾರಕ್ಕೆ ಮನವಿ

Spread the love

ಬೆಳಗಾವಿ – ವಸತಿ ಸೌಲಭ್ಯ ನೀಡಿ : ಲಿಂಗತ್ವ ಅಲ್ಪಸಂಖ್ಯಾತರಿಂದ ಸರ್ಕಾರಕ್ಕೆ ಮನವಿ
ಬೆಳಗಾವಿ: ಲಿಂಗತ್ವ ಅಲ್ಪ ಸಂಖ್ಯಾತರಿಗೆ ಸರಕಾರ ವಸತಿ ಸೌಲಭ್ಯ ನೀಡಬೇಕು. ವಸತಿಗಾಗಿ ಪ್ರತ್ಯೇಕವಾದ ಯೋಜನೆ ರೂಪಿಸಬೇಕು ಎಂದು ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳುವಳಿಯ ಮುಖಂಡೆ ಕಿರಣ ಬೇಡಿ ಹೇಳಿದರು.
ಶನಿವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರು ಉದ್ಯಮ ಶೀಲತೆಯಲ್ಲಿ ತೋಡಗಿಸಿಕೊಳ್ಳಲು ಯೋಜನೆ ರೂಪಿಸಬೇಕು. ಇದಕ್ಕಾಗಿ ಪ್ರತಿ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗೆ 2 ಲಕ್ಷ ಆರ್ಥಿಕ ನೆರವು ನೀಡಲು ಸರಕಾರ ಬಜೆಟ್ ನಲ್ಲಿ ಮೀಸಲಿಡಬೇಕು ಎಂದು ಒತ್ತಾಯಿಸಿದರು.
ಉಚಿತ ಲಿಂಗ ಪರಿವರ್ತನೆ ಶಸ್ತ್ರ ಚಿಕಿತ್ಸೆ ಮತ್ತು ಶಸ್ತ್ರ ಚಿಕಿತ್ಸೆಯ ಬಳಿಕ 6 ತಿಂಗಳ ಆರೈಕೆಯ ಬೆಂಬಲ ನೀಡಲು ಬಜೆಟ್ ನಲ್ಲಿ ಮೀಸಲಿಡಬೇಕು ಎಂದರು.
ಶೇ.1 ರಷ್ಟು ಮೀಸಲಾತಿ ಉದ್ಯೋಗವನ್ನು ಪಡೆಯಲು ಸರಕಾರ ಲಿಂಗತ್ವ ಅಲ್ಪಸಂಖ್ಯಾತರಿಗೆ ತರಬೇತಿ ಕೋಚಿಂಗ್ ನೀಡಬೇಕು. ಇದಕ್ಕಾಗಿ ಪ್ರತ್ಯೇಕ ನಿಗಮ ರಚನೆ ಮಾಡಬೇಕೆಂದು ಒತ್ತಾಯಿಸಿದರು. ಪ್ರಕಾಶ ಮರಾಠೆ, ಸಂಪತ್ತ ದೊಡ್ಮನಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ