ಕಾಂಗ್ರೆಸ್ ಸರ್ಕಾರ ದಲಿತರಿಗೆ ಮಾಡಿದೆ ಅನ್ಯಾಯ; ಮಾಜಿ ಸಚಿವ ಎಂ.ಮಹೇಶ್
ಬೆಳಗಾವಿ: ಪಂಚ ಗ್ಯಾರಂಟಿ ಯೋಜನೆಯ ಮೂಲಕ ಅಧಿಕಾರಕ್ಕೆ ಬಂದಿರುವ ರಾಜ್ಯ ಸರಕಾರ ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಕೋಟ್ಯಾಂತರ ರೂ. ಅನುದಾನದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಿ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಸಚಿವ ಎಂ.ಮಹೇಶ್ ಹೇಳಿದರು.
ಶನಿವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿ ಘೋಷಣೆ ಮಾಡಿ ಗೆಲುವು ಸಾಧಿಸಿದರು.
ದಲಿತರು ಇವರ ಮಾತನ್ನು ನಂಬಿ ಕಾಂಗ್ರೆಸ್ ಗೆ ಪೂರ್ಣ ಬಹುಮತದೊಂದಿಗೆ ಸರಕಾರ ರಚನೆ ಮಾಡಿದ್ದರು. ಐದು ಗ್ಯಾರಂಟಿ ಯೋಜನೆಗೆ ಪ್ರತಿ ವರ್ಷ 52 ಸಾವಿರ ಕೋಟಿ ರೂ. ಪ್ರತಿ ಬಜೆಟ್ ನಲ್ಲಿ ಮೀಸಲಿಡುವುದಾಗಿ ಹೇಳಿದ್ದರು. ಆದರೆ ದಲಿತ ಸಮುದಾಯದ ಅಭಿವೃದ್ಧಿಗೆ ಇರುವ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಂಡು ದಲಿತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಹರಿಹಾಯ್ದರು.
ಎಸ್ ಟಿಪಿ, ಟಿಎಸ್ ಪಿ ಅನುದಾನವನ್ನು ಸರಕಾರ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಳ್ಳುತ್ತಿದೆ. ದಲಿತ ಸಮುದಾಯದ ಆರ್ಥಿಕ ಅಭಿವೃದ್ಧಿಯಾಗಬೇಕು ಸರಕಾರ ಇದರಿಗೆ ಸಹಾಯ ಮಾಡಬೇಕು ಎಂದು ಎಸ್ ಟಿಪಿ, ಟಿಎಸ್ ಪಿ ಯೋಜನೆಯಲ್ಲಿ ಇವುಗಳನ್ನು ಮಾಡಬೇಕೆಂದು ಕೇಂದ್ರ ಸರಕಾರ ಸಲಹೆ ನೀಡಿತ್ತು. ಆದರೆ ಇವುಗಳೆಲ್ಲ ಯೋಜನೆಯನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯದ 281 ವಸತಿ ನಿಲಯಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಸರಕಾರಿ ಶಾಲೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಆದರೆ ವಸತಿ ಶಿಕ್ಷಣ ಸಂಸ್ಥೆಗಳು ಖಾಸಗಿ ಕಟ್ಟಡದಲ್ಲಿ ನಡೆಯುತ್ತಿರುದು ದುರಂತದ ಸಂಗತಿ ಎಂದರು.
ಬೆಳಗಾವಿಯಲ್ಲಿ ಗಂಗಾ ಕಲ್ಯಾಣ ಯೋಜನೆ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ಭೋವಿ ಅಭಿವೃದ್ಧಿ ನಿಗಮದ ಅನುದಾನವನ್ನು ಸಹ ಸರಕಾರ ಗ್ಯಾರಂಟಿ ಯೋಜನೆಗೆ ಬಳಿಕೆ ಮಾಡಿ ದಲಿತರ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು. ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Laxmi News 24×7