Breaking News

ಬಳ್ಳಾರಿಯಲ್ಲಿ ಕೋಳಿಗಳ ಸಾವು 8 ಸಾವಿರ ಕೋಳಿಗಳು ಮೃತಪಟ್ಟಿದ್ದು, ಹಕ್ಕಿ ಜ್ವರ ಕಾರಣವಾಗಿರಬಹುದು ಎಂಬ ಶಂಕೆ?

Spread the love

ಬಳ್ಳಾರಿ: ತಾಲೂಕಿನ ಕಪ್ಪಗಲ್ಲು ಗ್ರಾಮದ ಕೋಳಿ ಫಾರಂವೊಂದರಲ್ಲಿ ಕಳೆದ ವಾರದಿಂದ 8 ಸಾವಿರ ಕೋಳಿಗಳು ಮೃತಪಟ್ಟಿದ್ದು, ಹಕ್ಕಿ ಜ್ವರ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ರವಿ ಎಂಬವರಿಗೆ ಸೇರಿದ ಫಾರಂನಲ್ಲಿ ಮೊದಲು 15 ಸಾವಿರ ಕೋಳಿಗಳಿದ್ದವು. ಈವರೆಗೆ 8 ಸಾವಿರ ಕೋಳಿಗಳು ಮೃತಪಟ್ಟಿವೆ. ಇದೀಗ 7 ಸಾವಿರ ಕೋಳಿಗಳು ಮಾತ್ರ ಉಳಿದಿವೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕೋಳಿಗಳು ಸಾಯುವ ಸಾಧ್ಯತೆಗಳಿವೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

“ಮೃತಪಟ್ಟ ಕೋಳಿಗಳ ಮಾದರಿಗಳನ್ನು ಬೆಂಗಳೂರಿಗೆ ಕಳುಹಿಸಲಾಗಿದೆ. ಅದನ್ನು ಭೋಪಾಲ್‌ನಲ್ಲಿರುವ ರಾಷ್ಟ್ರೀಯ ಉನ್ನತ ಭದ್ರತಾ ಪ್ರಾಣಿ ರೋಗಗಳ ಸಂಸ್ಥೆಗೆ ರವಾನಿಸಿ ಪರೀಕ್ಷೆ ಮಾಡಿಸಲಾಗುತ್ತದೆ. ಮಂಗಳವಾರದ ವೇಳೆಗೆ ವರದಿ ಬರಬಹುದು. ಹಕ್ಕಿ ಜ್ವರ ಇರುವುದು ದೃಢಪಟ್ಟರೆ, ಉಳಿದ ಕೋಳಿಗಳನ್ನೂ ವಧೆ ಮಾಡಲಾಗುವುದು” ಎಂದು ಇಲಾಖೆಯ ಉಪನಿರ್ದೇಶಕ ಡಾ.ಕಾರಬಾರಿ ತಿಳಿಸಿದರು.

“ಜಿಲ್ಲೆಯಲ್ಲಿ ಹಕ್ಕಿ ಜ್ವರ ತಡೆಯಲು ಮತ್ತು ಪರಿಶೀಲಿಸಲು ಪಶು ಸಂಗೋಪನಾ ಇಲಾಖೆ 10 ತಂಡಗಳನ್ನು ರಚಿಸಿದೆ. ಈ ತಂಡಗಳು ನಿತ್ಯ ಇಲಾಖೆಗೆ ವರದಿ ನೀಡಲಿವೆ. ಜಿಲ್ಲೆಯು ಆಂಧ್ರ ಪ್ರದೇಶದೊಂದಿಗೆ ಗಡಿ ಹಂಚಿಕೊಂಡಿದ್ದು, ಚೆಕ್‌ಪೋಸ್ಟ್‌ಗಳಲ್ಲೂ ಪರಿಶೀಲನೆ ನಡೆಯುತ್ತಿದೆ. ಬಳ್ಳಾರಿಯಲ್ಲಿ ಒಟ್ಟು 74 ಕೋಳಿ ಫಾರಂಗಳಿವೆ. 14 ಮೊಟ್ಟೆ ಸಂವರ್ಧನಾ ಕೇಂದ್ರಗಳಿವೆ. ಇವುಗಳ ಮೇಲೆ ತೀವ್ರ ನಿಗಾ ವಹಿಸಲಾಗಿದೆ” ಎಂದರು.


Spread the love

About Laxminews 24x7

Check Also

ಕಸಾಯಿ ಗಲ್ಲಿಯ ರಸ್ತೆಯಲ್ಲಿ ನಿರ್ಮಾಣಗೊಂಡ ಬೃಹತ್ ಗುಂಡಿ…

Spread the love ಕಸಾಯಿ ಗಲ್ಲಿಯ ರಸ್ತೆಯಲ್ಲಿ ನಿರ್ಮಾಣಗೊಂಡ ಬೃಹತ್ ಗುಂಡಿ… ಸಂಚರಿಸಲು ಪರದಾಡುತ್ತಿರುವ ವಾಹನ ಸವಾರರು…ಸಮಸ್ಯೆ ಬಗೆಹರಿಸಿದ್ದರೇ ಪ್ರತಿಭಟನೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ