Breaking News

ಟಿಪ್ಪರ್, ಕಾರು ಮಧ್ಯೆ ಡಿಕ್ಕಿ ಸಂಭವಿಸಿ ಐವರು ಮೃತಪಟ್ಟ ಘಟನೆ ಕೊಳ್ಳೇಗಾಲ ತಾಲೂಕಿನಲ್ಲಿ ನಡೆದಿದೆ.

Spread the love

ಚಾಮರಾಜನಗರ: ಟಿಪ್ಪರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ ಘಟನೆ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ರಸ್ತೆಯಲ್ಲಿ ನಡೆದಿದೆ.

ಅಪಘಾತದಲ್ಲಿ ಮಂಡ್ಯ ನೋಂದಣಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಐವರು ಸ್ಥಳದಲ್ಲೇ ಅಸುನೀಗಿದ್ದಾರೆ. ಮೈಸೂರಿನ ಶ್ರೀಲಕ್ಷ್ಮೀ(20), ಲಿಖಿತಾ, ಮಂಡ್ಯದ ಸುಹಾಸ್, ನಿತಿನ್ ಮತ್ತು ಶ್ರೇಯಸ್ ಮೃತಪಟ್ಟವರೆಂದು ತಿಳಿದುಬಂದಿದೆ. ಮೃತರೆಲ್ಲರೂ ಸ್ನೇಹಿತರಾಗಿದ್ದು, ಮಹಾಶಿವರಾತ್ರಿ ರಥೋತ್ಸವ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು.

ವೀಕೆಂಡ್ ಹಿನ್ನೆಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ಬಳಿಕ‌ ಹೊಗೆನಕಲ್ ಜಲಪಾತಕ್ಕೆ ಹೋಗಲು ಸ್ನೇಹಿತರು ಹೋಗಲು ಪ್ಲ್ಯಾನ್ ಮಾಡಿದ್ದರು ಎಂದು ತಿಳಿದುಬಂದಿದೆ.ಹನೂರು ಕಡೆಯಿಂದ ಬಂದ ಖಾಲಿ ಟಿಪ್ಪರ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಬಳಿಕ ಎರಡೂ ವಾಹನಗಳು ರಸ್ತೆ ಬದಿ ಪಲ್ಟಿಯಾಗಿವೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಶವಗಳನ್ನು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ರವಾನೆ ಮಾಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಪಘಾತದ ಬಳಿಕ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ. KA 21 N5876 ನೋಂದಣಿ ಇರುವ ಕಾರು ಅಪಘಾತಕ್ಕೀಡಾಗಿದ್ದು, ನುಜ್ಜುಗುಜ್ಜಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ