Breaking News

ಜೈನ್ ವಿಶ್ವವಿದ್ಯಾಲಯದಲ್ಲಿ ಬಿಆರ್ ಅಂಬೇಡ್ಕರ್​​ರಿಗೆ ಅವಮಾನ: ವಿದ್ಯಾರ್ಥಿಗಳ ಮೇಲಿನ ಕೇಸ್ ರದ್ದುಗೊಳಿಸಿದ ಹೈಕೋರ್ಟ್

Spread the love

ಬೆಂಗಳೂರು, ಮಾರ್ಚ್​​ 01: ಡಾ. ಬಿಆರ್ ಅಂಬೇಡ್ಕರ್ (BR Ambedkar)​ ಕುರಿತು ವಿಡಂಬನಾತ್ಮಕ ನಾಟಕ ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜೈನ್ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳ ಮತ್ತು ಅಧ್ಯಾಪಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದೆ.

ವಿಡಂಬನಾತ್ಮಕ ನಾಟಕಕ್ಕೆ ಸಂವಿಧಾನದ ಆರ್ಟಿಕಲ್ 19 ರಕ್ಷಣೆಯಿದೆ. ನಾಟಕದಲ್ಲಿ ದಲಿತ ದೌರ್ಜನ್ಯದ ಉದ್ದೇಶವಿರಲಿಲ್ಲ ಎಂದು ನ್ಯಾ.ಎಸ್.ಆರ್.ಕೃಷ್ಣಕುಮಾರ್​ರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದ್ದು, ಹೀಗಾಗಿ ಕೇಸ್ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಶನಿವಾರ ಆದೇಶ ಹೊರಡಿಸಿದೆ.ಲಾಲ್ ಬಾಗ್ ರಸ್ತೆಯಲ್ಲಿರುವ ಜೈನ್ ಯೂನಿವರ್ಸಿಟಿಯ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್​ ಯೂತ್ ಫೆಸ್ಟ್ ಅಂಗವಾಗಿ ಫೆಬ್ರವರಿ 6ರಂದು ಆಯೋಜಿಸಲಾಗಿದ್ದ ಸ್ಕಿಟ್ ಸಾಕಷ್ಟು ವಿವಾದ ಸೃಷ್ಟಿಸಿತ್ತು.

ಯಾಕಂದರೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಬಳಸಿದ್ದ ಕೆಲ ಪದಗಳು ದಲಿತ ಸಂಘಟನೆಗಳನ್ನ ಕೆರಳಿಸಿತ್ತು.

ಫೆ. 6ರಂದು ಕಾಲೇಜಿನ ಯುವಜನೋತ್ಸವ ಕಾರ್ಯಕ್ರಮದಲ್ಲಿ ಮ್ಯಾಡ್ ಆ್ಯಡ್ ಪ್ರದರ್ಶನದಲ್ಲಿ ಅಂಬೇಡ್ಕರ್ ಹಾಗೂ ದಲಿತರ ಬಗ್ಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ