Breaking News

ಡಬ್ಬಲ್ ಮರ್ಡರ್ ಮಾಡಿ ಜೈಲುಪಾಲಾಗಿದ್ದ ವಿಚಾರಣಾಧೀನ ಖೈದಿ ಜೈಲಿನಲ್ಲಿ ನೇಣಿಗೆ ಶರಣು

Spread the love

ಹಾವೇರಿ, : ವಿಚಾರಣಾಧೀನ ಕೈದಿ ಜೈಲಿನಲ್ಲಿ ನೇಣಿಗೆ ಶರಣಾಗಿರುವಂತಹ (death) ಘಟನೆ ಹಾವೇರಿಯ ಕೆರೆಮತ್ತಿಹಳ್ಳಿ ಬಳಿ ಇರುವ ಜಿಲ್ಲಾಕಾರಾ ಗೃಹದಲ್ಲಿ ನಡೆದಿದೆ. ಕೋಟೆಪ್ಪ ಅಂಬಿಗೇರ್ (42) ನೇಣಿಗೆ ಶರಣಾದ ಖೈದಿ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಶವಗಾರದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮೃತ ಕೋಟೆಪ್ಪ ಅಂಬಿಗೇರ್​​ ಸುಮಾರು ಆರುವರೆ ವರ್ಷಗಳ ಹಿಂದೆ ಡಬ್ಬಲ್ ಮರ್ಡರ್ ಮಾಡಿ ಜೈಲು ಪಾಲಾಗಿದ್ದರು. ಹೃದಯ ಸಂಬಂಧಿ ಕಾಯಿಲೆ ಇತ್ತು. ನ್ಯಾಯಾಲಯದಿಂದ ಬೆಲ್ ಸಿಕ್ಕಿರಲಿಲ್ಲ.

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ  ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಗೌಡಳ್ಳಿ ಗ್ರಾಮದಲ್ಲಿ ನಡೆದಿದೆ. ಅರುಣ್(28) ಮೃತ ವ್ಯಕ್ತಿ. ಅರುಣ್ ಸಾವಿಗೆ ಮೈಕ್ರೋ ಫೈನಾನ್ಸ್ ಕಂಪನಿಯೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುತ್ತೂಟ್ ಫೈನಾನ್ಸ್​ನಲ್ಲಿ 3 ಲಕ್ಷ ರೂ. ಸಾಲ ಮಾಡಿದ್ದ ಅರುಣ್, ಸಾಲ ಮರುಪಾವತಿ ಮಾಡುವಂತೆ ಮೊನ್ನೆ ರಾತ್ರಿ ನಿಂದನೆ ಆರೋಪ ಮಾಡಲಾಗಿದೆ. ಇದರಿಂದ ಮನನೊಂದು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅರುಣ್, ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.

ಪ್ರಯಾಣಿಕರ ಸೋಗಿನಲ್ಲಿ ಪಿಕ್ ಪಾಕೆಟ್: ಐನಾತಿ ಕಳ್ಳಿಯ ಬಂಧನ

ಪ್ರಯಾಣಿಕರ ಸೋಗಿನಲ್ಲಿ ಬಸ್​​ನಲ್ಲಿ ಪಿಕ್ ಪಾಕೆಟ್ ಮಾಡುತ್ತಿದ್ದ ಐನಾತಿ ಕಳ್ಳಿಯ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಅಲುವೇಲಮ್ಮ ಬಂಧಿತ ಕಳ್ಳಿ. ಬಂಧಿತ ಆರೋಪಿಯಿಂದ ಸುಮಾರು 10,5 ಲಕ್ಷ ರೂ ಬೆಲೆ ಬಾಳುವ 134 ಗ್ರಾಂ ಚಿನ್ನದ ಒಡವೆ ವಶಕ್ಕೆ ಪಡೆಯಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ