Breaking News

ಬೆಳಗಾವಿಯಲ್ಲಿ ಕನಿಷ್ಠ, ಕಾರವಾರದಲ್ಲಿ ಅತ್ಯಂತ ಗರಿಷ್ಠ ತಾಪಮಾನ

Spread the love

ಬೆಂಗಳೂರು, :   ಕರ್ನಾಟಕದಾದ್ಯಂತ ಒಣಹವೆ ಮುಂದುವರೆದಿದೆ. ಬೆಳಗಾವಿ ಏರ್​ಪೋರ್ಟ್​ನಲ್ಲಿ 15.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಗರಿಷ್ಠ ತಾಪಮಾನ ಹೊನ್ನಾವರ, ಕಾರವಾರ, ಪಣಂಬೂರಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಳವಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಾಗಿತ್ತು. ಬೆಂಗಳೂರಿನ ಎಚ್​ಎಎಲ್​ನಲ್ಲಿ ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯವಾಗಿತ್ತು.

ಗರಿಷ್ಠ ತಾಪಮಾನ ಕರಾವಳಿ ಕರ್ನಾಟಕದಲ್ಲಿ 36-38 ಡಿಗ್ರಿ ಸೆಲ್ಸಿಯಸ್​ನಷ್ಟಿದೆ. ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ರಾಯಚೂರು ಮತ್ತು ಹಾವೇರಿಯಲ್ಲಿ 36-38 ಡಿಗ್ರಿ ಸೆಲ್ಸಿಯಸ್​, ಉತ್ತರ ಕರ್ನಾಟಕದ ಕಲಬುರಗಿಯಲ್ಲಿ 36-37 ಡಿಗ್ರಿ ಸೆಲ್ಸಿಯಸ್, ಚಿಂತಾಮಣಿ, ಬೆಂಗಳೂರು ಮತ್ತು ಆಗುಂಬೆಯಲ್ಲಿ 34-36 ಡಿಗ್ರಿ ಸೆಲ್ಸಿಯಸ್​ನಷ್ಟಿರುತ್ತದೆ.

ಉತ್ತರ ಒಳನಾಡಿನ ವಿಜಯಪುರದಲ್ಲಿ ಕನಿಷ್ಠ ತಾಪಮಾನ ಗಮನಾರ್ಹವಾಗಿ ಇಳಿಕೆ ಕಂಡಿದೆ. ಬೀದರ್ ಮತ್ತು ಧಾರವಾಡದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಇದೆ. ದಕ್ಷಿಣ ಒಳನಾಡಿನ ಒಳನಾಡಿನ ಬೆಂಗಳೂರು ನಗರ, ಚಿಂತಾಮಣಿಯಲ್ಲಿ ಸ್ವಲ್ಪ ಕಡಿಮೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಉಷ್ಣ ಅಲೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ