Breaking News

ರಾಜ್ಯಪಾಲರ ಭಾಷಣ ಯಶಸ್ವೀ ಸರ್ಕಾರದ ಯಶೋಗಾಥೆ: ಈಶ್ವರ ಖಂಡ್ರೆ

Spread the love

ರಾಜ್ಯಪಾಲರ ಭಾಷಣ ಯಶಸ್ವೀ ಸರ್ಕಾರದ ಯಶೋಗಾಥೆ: ಈಶ್ವರ ಖಂಡ್ರೆ

ಬೆಂಗಳೂರು : ರಾಜ್ಯಪಾಲರು ಉಭಯ ಸದನ ಉದ್ದೇಶಿಸಿ ಇಂದು ಮಾಡಿದ ಭಾಷಣ ಯಶಸ್ವೀ ಸರ್ಕಾರದ ಯಶೋಗಾಥೆಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ರಾಜ್ಯಪಾಲರ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ಸರ್ಕಾರದ ಸಾಧನೆಗಳನ್ನು ಸಮರ್ಥವಾಗಿ ತೆರೆದಿಟ್ಟಿರುವುದಲ್ಲದೇ, ಹೊಸ ಯೋಜನೆಗಳ ಮೂಲಕ ರಾಜ್ಯದ ಅಭಿವೃದ್ಧಿಗೆ ದಿಕ್ಸೂಚಿಯಾಗಿದೆ ಎಂಬುದನ್ನು ಭಾಷಣ ಸ್ಪಷ್ಟವಾಗಿ ಸಾರಿದೆ ಎಂದು ಹೇಳಿದ್ದಾರೆ.

ಗ್ಯಾರಂಟಿಗಳು ಮತ್ತು ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಿಂದ ಅಸಮಾನತೆ ತಗ್ಗಿದ್ದರೆ, ರಾಜ್ಯವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕ ರಾಜ್ಯ ಮಾಡುವ ನಿಟ್ಟಿನಲ್ಲಿ ಸಮಗ್ರ ಹಾಗೂ ಸಮರ್ಥ ಪ್ರಯತ್ನ ಮಾಡುವ ಸಂಕಲ್ಪ ರಾಜ್ಯದ ಜನರಲ್ಲಿ ಮತ್ತು ಹೂಡಿಕೆದಾರರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ ಎಂದು ಖಂಡ್ರೆ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶವೂ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳು ಪ್ರಾದೇಶಿಕ ಅಸಮತೋಲದಿಂದ ನಲುಗಿವೆ. ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು 2002ರಲ್ಲಿ ರಚಿಸಲಾಗಿದ್ದ ಡಾ. ಡಿ.ಎಂ. ನಂಜುಂಡಪ್ಪ ವರದಿ ಆಧರಿಸಿ ಈವರೆಗೆ ಬಿಡುಗಡೆ ಮಾಡಲಾಗಿರುವ 37662 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ವೆಚ್ಚ ಮಾಡಿದ ಸಂಪನ್ಮೂಲದ ಪರಿಣಾಮ ಹಾಗೂ ಮುಂದುವರಿದ ಪ್ರಾದೇಶಿಕ ಅಸಮತೋಲನ ಕುರಿತು ಅಧ್ಯಯನ ಮಾಡಲು ನೇಮಕ ಮಾಡಲಾಗಿರುವ ಸಮಿತಿ ನೀಡುವ ವರದಿ ಆಧರಿಸಿ ಅಭಿವೃದ್ಧಿಗೆ ಮುಂದಾಗುವುದಾಗಿ ಘೋಷಿಸಿರುವುದು ಉತ್ತಮ ನಡೆಯಾಗಿದೆ.

ವಸತಿ ಸಮಸ್ಯೆಯ ಪರಿಹಾರಕ್ಕೆ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ, ಯುವಜನರ ಕೌಶಲ್ಯಾಭಿವೃದ್ಧಿಗೆ ರೂಪಿಸಿರುವ ಕಾರ್ಯಕ್ರಮಗಳ ಬಗ್ಗೆಯೂ ಭಾಷಣದಲ್ಲಿ ಪ್ರಸ್ತಾಪಿಸಲಾಗಿದ್ದು, ಇದೆಲ್ಲವೂ ಯುವ ಜನರಲ್ಲಿ ಹೊಸ ಚೈತನ್ಯ ಮೂಡಿಸುವುದರ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ