Breaking News

ಬೆಳಗಾವಿ-ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ- 4ಎ ವಿಸ್ತರಣೆ ಕಾಮಗಾರಿಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

Spread the love

ನವದೆಹಲಿ: ದಾಂಡೇಲಿ ಅರಣ್ಯದ ಮೂಲಕ ಹಾದು ಹೋಗುವ ಬೆಳಗಾವಿ-ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ- 4ಎ ವಿಸ್ತರಣೆ ಕಾಮಗಾರಿಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ನವೆಂಬರ್ 2019ರಲ್ಲಿ ಕಾಮಗಾರಿಗೆ ತಡೆ ಪರಿಸರವಾದಿ ಹಾಗೂ ನಿರ್ದೇಶಕ ಸುರೇಶ್ ಹೆಬ್ಳಿಕರ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಹೆದ್ದಾರಿ ವಿಸ್ತರಣೆ ಕಾಮಗಾರಿಗೆ ತಡೆಯಾಜ್ಞೆ ನೀಡಿತ್ತು.

ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್, ಹೇಮಂತ್ ಗುಪ್ತಾ ಮತ್ತು ಅಜಯ್ ರಸ್ತೋಗಿ ಅವರನ್ನೊಳಗೊಂಡ ಸುಪ್ರೀಂ ಪೀಠ, ಇತರೆ ಯಾವುದೇ ಕಾರಣಕ್ಕಾಗಿ ಕರ್ನಾಟಕ ಹೈಕೋರ್ಟ್ ಅನ್ನು ಸಂಪರ್ಕಿಸಲು ಹೆದ್ದಾರಿ ಪ್ರಾಧಿಕಾರಕ್ಕೆ ಸ್ವಾತಂತ್ರ್ಯ ಇದೆ ಎಂದು ಹೇಳಿದೆ.

ದಾಂಡೇಲಿ ಅರಣ್ಯ ಪ್ರದೇಶವನ್ನು ಸೂಕ್ಷ್ಮ ಪರಿಸರ ವಲಯವೆಂದು ಈಗಾಗಲೇ ಘೋಷಣೆಯಾಗಿದ್ದರೂ 14 ಕೀ.ಮೀ ರಸ್ತೆಯನ್ನು ವಿಸ್ತರಿಸುವ ನೆಪದಲ್ಲಿ 22 ಸಾವಿರ ಮರಗಳನ್ನು ಕತ್ತರಿಸಿದ್ದು, ಮುಂದಿನ ದಿನಗಳಲ್ಲಿ 1 ಲಕ್ಷ ಮರಗಳನ್ನು ಕತ್ತರಿಸಲು ಸಜ್ಜಾಗಿದ್ದಾರೆ. ಅಲ್ಲದೆ ಹೆದ್ದಾರಿ ವಿಸ್ತರಣೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಅನುಮತಿ ಪಡೆದಿಲ್ಲ ಎಂದು ಸುರೇಶ್ ಹೆಬ್ಳಿಕರ್ ಪರ ವಕೀಲರು ಹೈಕೋರ್ಟ್ ಗೆ ತಿಳಿಸಿದ್ದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಕಾಮಗಾರಿಗೆ ಮಧ್ಯಂತರ ತಡೆ ನೀಡಿತ್ತು.


Spread the love

About Laxminews 24x7

Check Also

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಹಾರಕ್ಕೆ ಪ್ರಯಾಣ.

Spread the love ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಹಾರಕ್ಕೆ ಪ್ರಯಾಣ. ಬೆಂಗಳೂರು : …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ