Breaking News

ಕಾರಿನ ಗಾಜಿಗೆ ಆಟೋ ಚಾಲಕನಿಂದ ಯದ್ವಾತದ್ವಾ ಗುದ್ದು: ವಿಡಿಯೋ ವೈರಲ್ ಬೆನ್ನಲ್ಲೇ ಆರೋಪಿ ಅರೆಸ್ಟ್

Spread the love

ಬೆಂಗಳೂರು, ಮಾರ್ಚ್ 4: ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬ ರಸ್ತೆಯಲ್ಲಿ ಕೋಪದಿಂದ ಕಿರುಚಾಡುತ್ತಾ ಕಾರಿನ ಗಾಜಿನ ಮೇಲೆ ಯದ್ವಾತದ್ವಾ ಗುದ್ದಾಡಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ವಿಡಿಯೋ ಗಮನಿಸಿದ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದು, ರೋಡ್​ರೇಜ್ ಪ್ರಕರಣಗಳಿಗೆ ನಗರದಲ್ಲಿ ಆಸ್ಪದ ನೀಡುವುದಿಲ್ಲ ಎಂದು ಖಡಕ್ ಸಂದೇಶ ರವಾನಿಸಿದ್ದಾರೆ.

ಜತೆಗೆ, ಆಟೊ ಚಾಲಕನ ದುಂಡಾವರ್ತನೆಯ ಹಾಗೂ ಆತನನ್ನು ಬಂಧಿಸಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.ಆಟಫ ಚಾಲಕನ ವರ್ತನೆಗೆ ಸಾಮಾಜಿಕ ಮಾಧ್ಯಮದಲ್ಲಿಯೂ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಆಟೋ ಚಾಲಕನ ಕೋಪಕ್ಕೆ ನಿಖರವಾದ ಕಾರಣ ಏನೆಂಬುದು ಗೊತ್ತಾಗಿಲ್ಲವಾದರೂ,

ಈ ದೃಶ್ಯಾವಳಿಗಳು ಬೆಂಗಳೂರು ಪೊಲೀಸರು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಮಾಡಿದ್ದಂತೂ ನಿಜ.ವೈರಲ್ ಆದ ಈ ವಿಡಿಯೋ ಕ್ಲಿಪ್‌ಗೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯ ಟ್ವಿಟರ್​​ ಹ್ಯಾಂಡಲ್​ನಿಂದ ಪ್ರತಿಕ್ರಿಯಿಸಲಾಗಿದ್ದು, ‘ರೋಡ್​​ ರೇಜ್​​ ಅನ್ನು ಸಹಿಸುವುದಿಲ್ಲ.

ನಮ್ಮ ತಂಡ ತಕ್ಷಣ ಕ್ರಮ ಕೈಗೊಂಡಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ರಸ್ತೆಯಲ್ಲಿ ಅಜಾಗರೂಕ ವರ್ತನೆ ಜೀವಗಳಿಗೆ ಅಪಾಯವನ್ನುಂಟು ಮಾಡುತ್ತದೆ – ಜವಾಬ್ದಾರಿಯುತವಾಗಿ ವಾಹನ ಚಲಾಯಿಸಿ’ ಎಂದು ಉಲ್ಲೇಖಿಸಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ