Breaking News

ಬಂಡೀಪುರಕ್ಕೆ ತೆರಳಿದ್ದ ಕುಟುಂಬ ನಿಗೂಢವಾಗಿ ನಾಪತ್ತೆ

Spread the love

ಚಾಮರಾಜನಗರ, ಮಾರ್ಚ್​ 04: ಗುಂಡ್ಲುಪೇಟೆ (Gundlupete) ತಾಲೂಕಿನ ಬಂಡೀಪುರಕ್ಕೆ (Bandipur) ತೆರಳಿದಿದ್ದ ಕುಟುಂಬವೊಂದು ನಿಗೂಢವಾಗಿ ನಾಪತ್ತೆಯಾಗಿದೆ. ಬಂಡೀಪುರ ಬಳಿಯ ಕಂಟ್ರಿ ಕ್ಲಬ್ ರೆಸಾರ್ಟ್‌ನಲ್ಲಿ ಕುಟುಂಬ ಭಾನುವಾರ (ಮಾ.02) ರಾತ್ರಿ ವಾಸ್ತವ್ಯ ಹೂಡಿತ್ತು. ಸೋಮವಾರ (ಮಾ.03) ಮಧ್ಯಾಹ್ನದಿಂದ ಕುಟುಂಬ ನಾಪತ್ತೆಯಾಗಿದೆ. ಬೆಂಗಳೂರು ಮೂಲದ ಜೆ.ನಿಶಾಂತ್ (40), ಪತ್ನಿ ಚಂದನಾ ಮತ್ತು 10 ವರ್ಷದ ಗಂಡು ಮಗು ನಾಪತ್ತೆಯಾಗಿದ್ದಾರೆ. ಜೆ.ನಿಶಾಂತ್ ಬ್ಯಾಗ್​ ಕಂಟ್ರಿ ಕ್ಲಬ್ ರೆಸಾರ್ಟ್​​ನಲ್ಲೇ ಇವೆ.

ರೆಸಾರ್ಟ್​ನಲ್ಲಿ ಲಗೇಜ್ ಬಿಟ್ಟು ಮೂವರು ಕಾರಿನಲ್ಲಿ ಹೊರಗೆ ಹೋಗಿದ್ದಾರೆ. ಕಾರಿನಲ್ಲಿ ಬಂಡೀಪುರ ಮಂಗಲ ರಸ್ತೆಯವರೆಗೆ ಹೋದವರು, ಅಲ್ಲಿಂದ ನಾಪತ್ತೆಯಾಗಿದ್ದಾರೆ. ಇನ್ನು, ಕುಟುಂಬ ನಾಪತ್ತೆಯಾದ ವಿಚಾರ ತಿಳಿದು ಚಾಮರಾಜನಗರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

ಕುಟುಂಬ ನಾಪತ್ತೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್

ನಿಶಾಂತ್ ಬಿಬಿಎಂಪಿ ನೌಕರ ಎಂದು ಹೇಳಿಕೊಂಡು ನಕಲಿ ಐಡಿ​ ನೀಡಿ ರೂಮ್ ಬುಕ್ ಮಾಡಿದ್ದನು. ನಾಪತ್ತೆಯಾಗಿರುವ ನಿಶಾಂತ್ ಮೈತುಂಬಾ ಸಾಲ ಮಾಡಿಕೊಂಡಿದ್ದನು. ನಿಶಾಂತ್ ಸದ್ಯ ಯಾವುದೇ ಕೆಲಸ ಕಾರ್ಯ ಮಾಡುತ್ತಿರಲಿಲ್ಲ. ನಿಶಾಂತ್ ಸಾಲಕ್ಕೆ ಹೆದರಿ ಕುಟುಂಬದ ಜತೆ ಬಂಡೀಪುರಕ್ಕೆ ತೆರಳಿದ್ದನು. ಸಾಲಗಾರರು ಅಪಹರಿಸಿರುವ ಶಂಕೆಯಿಂದ ಪೊಲೀಸರಿಂದ ತಲಾಶ್ ನಡೆಸಿದ್ದಾರೆ. ತಮಿಳುನಾಡು, ಕೇರಳ ಹಾಗೂ ಮೈಸೂರು ಸೇರಿದಂತೆ ಹಲವೆಡೆ ಹುಡುಕಾಡುತ್ತಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ