Breaking News

ಕಲ್ಯಾಣ ಕರ್ನಾಟಕದ ಜನರಿಗೆ ಭರ್ಜರಿ ಸಿಹಿಸುದ್ದಿ

Spread the love

ಬೆಂಗಳೂರು : ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಘೋಷಣೆಯಾಗಿರುವ 1,100 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲು ಯೋಜನಾ ಇಲಾಖೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಆದೇಶ ನೀಡಿದ್ದಾರೆ. ಕಲ್ಯಾಣ ಕರ್ನಾಟಕದ ಜನರಿಗೆ ಇದು ಭರ್ಜರಿ ಸಿಹಿಸುದ್ದಿಯಾಗಿದೆ.

ಸದನದಲ್ಲಿ ಪೂರಕ ಅಂದಾಜು ವಿಷಯದ ಮೇಲೆ ಚರ್ಚೆ ನಡೆಯುತ್ತಿದ್ದ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಅನುದಾನದ ಬಗ್ಗೆ ಪ್ರಸ್ತಾಪಿಸಿದರು. ಅನುದಾನ ಘೋಷಣೆಯಾದರೂ ಬಿಡುಗಡೆಯಾಗದಿರುವುದರಿಂದ ಯಾವುದೇ ಕಾಮಗಾರಿ ಕೈಗೊಳ್ಳಲು ಸಾಧ್ಯವಿಲ್ಲ. ತಕ್ಷಣ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಬಸವರಾಜ ಬೊಮ್ಮಾಯಿ, ಯೋಜನಾ ಇಲಾಖೆ ಜೊತೆ ಸಭೆ ನಡೆಸಲಾಗಿದ್ದು,ಅನುದಾನ ಬಿಡುಗಡೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಮಹೇಶ್ವರಿ ಅಂಧ ಮಕ್ಕಳ ಶಾಲೆ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

Spread the loveಬೆಳಗಾವಿ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 2026 ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ವತಿಯಿಂದ,ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ