ಚಿಕ್ಕೋಡಿ : ತಾಯಿಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂಚಲಿ ಪಟ್ಟಣದಲ್ಲಿನ ಕೃಷ್ಣಾ ನದಿ ಬಳಿ ಇಂದು ಮುಂಜಾನೆ ನಡೆದಿದೆ. ಮೃತರನ್ನು ಶಾರದಾ ಢಾಲೆ (38) ಹಾಗೂ 8, 10 ಮತ್ತು, 14 ವರ್ಷ ವಯಸ್ಸಿನ ಮಕ್ಕಳು ಎಂದು ಗುರುತಿಸಲಾಗಿದೆ.
ದಿನನಿತ್ಯ ಗಂಡ ಗಲಾಟೆ ಮಾಡುತ್ತಿದ್ದ ಕಾರಣಕ್ಕೆ ಮಹಿಳೆ ತನ್ನ ಮೂವರು ಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ತಿಳಿದು ಬಂದಿದೆ. ಗಂಡ ಅಶೋಕ್ ಢಾಲೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ ಈಟಿವಿ ಭಾರತ ಜೊತೆ ದೂರವಾಣಿ ಮುಖಾಂತರ ಮಾತನಾಡಿ, “ಪ್ರಕರಣ ನಡೆದ ಸ್ಥಳಕ್ಕೆ ನಮ್ಮ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನನಗೆ ಬೆಳಗಾವಿಯಲ್ಲಿ ಮೀಟಿಂಗ್ ಇರುವುದರಿಂದ ಡಿವೈಎಸ್ಪಿ ಅವರಿಗೆ ಭೇಟಿ ನೀಡುವಂತೆ ತಿಳಿಸಿದ್ದೇನೆ.
ಸದ್ಯಕ್ಕೆ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತಿಳಿದು ಬಂದಿಲ್ಲ. ತನಿಖೆ ನಂತರವಷ್ಟೇ ಸತ್ಯಾಸತ್ಯತೆ ಗೊತ್ತಾಗಲಿದೆ” ಎಂದು ತಿಳಿಸಿದರು.