Breaking News

ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

Spread the love

ಚಿಕ್ಕೋಡಿ : ತಾಯಿಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂಚಲಿ ಪಟ್ಟಣದಲ್ಲಿನ ಕೃಷ್ಣಾ ನದಿ ಬಳಿ ಇಂದು ಮುಂಜಾನೆ ನಡೆದಿದೆ. ಮೃತರನ್ನು ಶಾರದಾ ಢಾಲೆ (38) ಹಾಗೂ 8, 10 ಮತ್ತು, 14 ವರ್ಷ ವಯಸ್ಸಿನ ಮಕ್ಕಳು ಎಂದು ಗುರುತಿಸಲಾಗಿದೆ.

ದಿನನಿತ್ಯ ಗಂಡ ಗಲಾಟೆ ಮಾಡುತ್ತಿದ್ದ ಕಾರಣಕ್ಕೆ ಮಹಿಳೆ ತನ್ನ ಮೂವರು ಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ತಿಳಿದು ಬಂದಿದೆ. ಗಂಡ ಅಶೋಕ್ ಢಾಲೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಳಗಾವಿ ಎಸ್​ಪಿ ಭೀಮಾಶಂಕರ್ ಗುಳೇದ ಈಟಿವಿ ಭಾರತ ಜೊತೆ ದೂರವಾಣಿ ಮುಖಾಂತರ ಮಾತನಾಡಿ, “ಪ್ರಕರಣ ನಡೆದ ಸ್ಥಳಕ್ಕೆ ನಮ್ಮ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನನಗೆ ಬೆಳಗಾವಿಯಲ್ಲಿ ಮೀಟಿಂಗ್ ಇರುವುದರಿಂದ ಡಿವೈಎಸ್ಪಿ ಅವರಿಗೆ ಭೇಟಿ ನೀಡುವಂತೆ ತಿಳಿಸಿದ್ದೇನೆ.

ಸದ್ಯಕ್ಕೆ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತಿಳಿದು ಬಂದಿಲ್ಲ. ತನಿಖೆ ನಂತರವಷ್ಟೇ ಸತ್ಯಾಸತ್ಯತೆ ಗೊತ್ತಾಗಲಿದೆ” ಎಂದು ತಿಳಿಸಿದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ