Breaking News

ಬಳ್ಳಾರಿಯಲ್ಲಿ ಹಕ್ಕಿಜ್ವರ ಭೀತಿ

Spread the love

ಬಳ್ಳಾರಿ : ಜಿಲ್ಲೆಯಲ್ಲಿ ಹಕ್ಕಿಜ್ವರ ಪತ್ತೆ ಹಿನ್ನೆಲೆ ಜಿಲ್ಲಾಡಳಿತವು ಆಂಧ್ರ ಪ್ರದೇಶದಿಂದ ಬರುವ ಕೋಳಿ ಸಾಗಾಟ ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಅಲರ್ಟ್ ಆಗಿರುವ ಜಿಲ್ಲಾಡಳಿತ, ಜಿಲ್ಲೆಯಾದ್ಯಂತ 5 ಚೆಕ್‌ಪೋಸ್ಟ್‌ಗಳನ್ನು ನಿರ್ಮಾಣ ಮಾಡಿದೆ. ಪ್ರಮುಖವಾಗಿ ಆಂಧ್ರಪ್ರದೇಶದ ಅನಂತಪುರ ಹಾಗೂ ಗುಂತಕಲ್ ಭಾಗದಿಂದ ಬರುವ ಕೋಳಿ ಸಾಗಾಟ ವಾಹನಗಳ ಮೇಲೆ ಜಿಲ್ಲಾಡಳಿತ ಕಣ್ಣಿಟ್ಟಿದೆ. ಆಂಧ್ರ ಗಡಿಗೆ ಹೊಂದಿಕೊಂಡಿರುವ ಪಿಡಿಹಳ್ಳಿ ಗ್ರಾಮದಲ್ಲೂ ಚೆಕ್​ಪೋಸ್ಟ್ ನಿರ್ಮಾಣ ಮಾಡಲಾಗಿದೆ.

ಪಿಡಿಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಸಿಬ್ಬಂದಿ, ಕೋಳಿಗಳ ಆರೋಗ್ಯ ಪರಿಶೀಲನೆ ಮಾಡಿಯೇ ವಾಹನಗಳನ್ನು ಜಿಲ್ಲೆಯ ಒಳಗೆ ಬಿಡುತ್ತಿದ್ದಾರೆ. ಪ್ರತಿ ಚೆಕ್‌ಪೋಸ್ಟ್‌ಗಳಿಗೂ ಪಶುವೈದ್ಯರನ್ನು ನಿಯೋಜನೆ ಮಾಡಲಾಗಿದೆ. ಸದ್ಯ ಹಕ್ಕಿಜ್ವರದ ಆತಂಕ ಹಿನ್ನೆಲೆ ವ್ಯಾಪಾರಸ್ಥರು, ಆಂಧ್ರದಿಂದ ಕೋಳಿ ಮಾಂಸ ಆಮದಿಗೆ ಹಿಂದೇಟು ಹಾಕುತ್ತಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ