Breaking News

ಸರಣಿ ಕಳ್ಳತನ- ಖದೀಮರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Spread the love

ವಿಜಯಪುರ: ಬುಧವಾರ ತಡರಾತ್ರಿಯಲ್ಲಿ ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ಸರಣಿ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಖತರ್ನಾಕ್ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸಿಂಧಗಿ ಪಟ್ಟಣದ ಸಂಗೀತಾ ಮೊಬೈಲ್ ಶೋರೂಂನಲ್ಲಿ ಲಕ್ಷಾಂತರ ರೂ. ಮೌಲ್ಯದ ಮೊಬೈಲ್‍ಗಳನ್ನು ಖದೀಮರು ದೋಚಿದ್ದಾರೆ. ಅಲ್ಲದೆ ಸಿದ್ದೇಶ್ವರ ಸೂಪರ್ ಬಾಜಾರ್, ಪೂಜಾರಿ ಟೈರ್ ರಿಮೊಡಿಂಗ್ ಶಾಫ್ ಹಾಗೂ ಸ್ಪೂರ್ತಿ ವೈನ್ ಶಾಫ್ ಗಳಲ್ಲಿಯೂ ಕಳ್ಳತನ ಮಾಡಿ ಖದೀಮರು ಪರಾರಿಯಾಗಿದ್ದಾರೆ.ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯಾವಳಿ ಆಧರಿಸಿ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಇಬ್ಬರು ಕಳ್ಳರಿಂದ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಸಿಂಧಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆಗೆ ನಡೆಸಿದ್ದಾರೆ. ಸಿಂಧಗಿ ಪೊಲೀಸ್ ಠಾಣೆಯಲ್ಲಿ ಈ ಕಳ್ಳತನ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕಬ್ಬು ಬೆಳೆಗಾರರಿಗೆ 300 ಕೋಟಿ ರೂ. ಬಿಡುಗಡೆ: ಸಚಿವ ಶಿವಾನಂದ ಪಾಟೀಲ

Spread the loveವಿಜಯಪುರ : ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ 2025-26ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ