Breaking News

ನಿಪ್ಪಾಣಿಯಲ್ಲಿ 100 ಬೆಡ್’ಗಳ ತಾಲೂಕಾಸ್ಪತ್ರೆ ನಿರ್ಮಿಸಿ…

Spread the love

ನಿಪ್ಪಾಣಿಯಲ್ಲಿ 100 ಬೆಡ್’ಗಳ ತಾಲೂಕಾಸ್ಪತ್ರೆ ನಿರ್ಮಿಸಿ…
ಬೆಳಗಾವಿ ಜಿಲ್ಲೆಯ ನೂತನ ತಾಲೂಕು ನಿಪ್ಪಾಣಿಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರವನ್ನ ಮೇಲ್ದರ್ಜೆಗೆರಿಸಿ, 100 ಬೆಡ್’ಗಳ ತಾಲೂಕಾ ಆಸ್ಪತ್ರೆಯನ್ನಾಗಿ ಪರಿವರ್ತಿಸಬೇಕೆಂದು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರು ಸದನದಲ್ಲಿ ಇಂದು ಧ್ವನಿ ಎತ್ತಿದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರಾದ ಡಾ. ದಿನೇಶ್ ಗುಂಡುರಾವ್ ಆದ್ಯತೆ ಮೇರೆಗೆ ಕ್ರಮಕೈಗೊಳ್ಳಲಾಗುವುದೆಂದು ಭರವಸೆಯನ್ನು ನೀಡಿದರು.
ನೂತನ ತಾಲೂಕಾ ರಚನೆಯಾದ ನಿಪ್ಪಾಣಿಯಲ್ಲಿರುವ 30 ಬೆಡ್’ಗಳ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೇಗೆರಿಸಿ 100 ಬೆಡ್ಡಿಗಳ ತಾಲೂಕಾ ಆಸ್ಪತ್ರೆಯನ್ನಾಗಿ ಪರಿವರ್ತಿಸಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೇ, ಇದಕ್ಕಾಗಿ 40 ಕೋಟಿ ಅನುದಾನ ಮತ್ತು ಮಾನವ ಸಂಪನ್ಮೂಲಕ್ಕಾಗಿ 7.95 ಕೋಟಿ ರೂಪಾಯಿಗಳ ವೆಚ್ಚವಾಗುತ್ತದೆ ಎಂದು ವಿಸ್ತಾರವಾದ ಮಾಹಿತಿಯನ್ನು ನೀಡಿದ್ದಾರೆ. ನಿಪ್ಪಾಣಿ ತಾಲೂಕು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಹ ಕ್ಷೇತ್ರವಾಗಿದ್ದು, ಅಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತವೆ. ಅಲ್ಲದೇ ಹೆರಿಗೆ ಸಂಖ್ಯೆಗಳು ಕೂಡ ಹೆಚ್ಚಾಗುತ್ತಿದ್ದು, ಹೊರರೋಗಿಗಳ ಚಿಕಿತ್ಸೆಗಾಗಿ ಮತ್ತು ತಾಲೂಕಿನ ಜನಹಿತಕ್ಕಾಗಿ ಶೀಘ್ರದಲ್ಲೇ ಸಮುದಾಯ ಆರೋಗ್ಯ ಕೇಂದ್ರವನ್ನ ಮೇಲ್ದರ್ಜೆಗೆ ಏರಿಸಬೇಕೆಂದು ಆಗ್ರಹಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಡಾ. ದಿನೇಶ್ ಗುಂಡುರಾವ್ ಅವರು ಹಂತಹಂತವಾಗಿ ಹೊಸ ತಾಲೂಕುಗಳಿಗೆ ಆಸ್ಪತ್ರೆಗಳನ್ನು ನಿರ್ಮಿಸಲಾಗುತ್ತಿದೆ. ಈ ಬಜೆಟನಲ್ಲಿಯೂ ಪ್ರಸ್ತಾಪವನ್ನು ಇಡಲಾಗಿದೆ. ಆದ್ಯತೆ ಮೇರೆಗೆ ಹೆಚ್ಚು ಅವಶ್ಯಕತೆಯಿರುವಲ್ಲಿ ತಾಲೂಕಾ ಆಸ್ಪತ್ರೆಯನ್ನು ನಿರ್ಮಿಸಲಾಗುವುದು ಎಂದರು.
ಈ ವೇಳೆ ಮಾತನಾಡಿದ ಶಾಸಕಿ ಶಶಿಕಲಾ ಜೊಲ್ಲೆ ಅವರು ಸಮುದಾಯ ಆರೋಗ್ಯ ಕೇಂದ್ರವನ್ನು ಅಭಿವೃದ್ಧಿ ಪಡಿಸುವುದಾದರೇ, ಉಪಕರಣಗಳು ಮತ್ತು ಮಾನವ ಸಂಪನ್ಮೂಲಗಳನ್ನು ಒದಗಿಸಬೇಕೆಂದರು. 10 ತಾಲೂಕು ಕೇಂದ್ರಗಳ ಪರ್ಯಾಯ ವ್ಯವಸ್ಥೆಯಿರುವುದಾಗಿ ಹೇಳಿದ್ದಾರೆ. ಅಲ್ಲಿರುವ ವೈದ್ಯ ಸಂಖ್ಯೆ ಮತ್ತು ಸಮಸ್ಯೆಗಳನ್ನು ನಿವಾರಿಸಬೇಕೆಂದರು.
ಎಂ.ಸಿ.ಎಚ್. ಆಸ್ಪತ್ರೆಯಲ್ಲಿ ಹೆರಿಗೆ ಸಂಖ್ಯೆ ಹೆಚ್ಚಾದರೇ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದಲ್ಲಿ ಹೆಚ್ಚಿನ ಅಭಿವೃದ್ಧಿ ಮಾಡಲಾಗುವುದು. ಅಲ್ಲದೇ ಎಂ.ಸಿ.ಎಚ್.ನಲ್ಲಿ ಖಾಲಿಯಿರುವ ಸ್ಥಾನಗಳನ್ನ ತುಂಬಲಾಗುವುದು ಎಂದರು.

Spread the love

About Laxminews 24x7

Check Also

ಜಲಜೀವನ್​​​ ಮಿಷನ್​​​ ಯೋಜನೆ ಅನುಷ್ಠಾನದಲ್ಲಿನ ತಪ್ಪುಗಳ ಬಗ್ಗೆ ತನಿಖೆ ?

Spread the loveಬೆಂಗಳೂರು: ತುಮಕೂರು ಜಿಲ್ಲೆಯ ಜಲಜೀವನ್​​ ಮಿಷನ್​​ ಯೋಜನೆ ಅನುಷ್ಠಾನದಲ್ಲಿ ನಾನಾ ತಪ್ಪುಗಳಾಗಿದ್ದು, ಸರ್ಕಾರ ತನಿಖೆ ನಡೆಸಿ ವರದಿ ನೀಡಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ