Breaking News

ಬೆಳ್ತಂಗಡಿ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಬಗ್ಗೆ ವಿಡಿಯೋ: ಯೂಟ್ಯೂಬರ್ ಸಮೀರ್​ಗೆ ಜಾರಿಯಾಗಿದ್ದ ನೋಟಿಸ್​ಗೆ ತಡೆ

Spread the love

ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆಗೆ ಸಂಬಂಧಿಸಿದಂತೆ ಯೂಟ್ಯೂಬ್​​ನಲ್ಲಿ ವಿಡಿಯೋ ಪೋಸ್ಟ್​ ಮಾಡಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ ಆರೋಪದಲ್ಲಿ ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್​ ಸಮೀರ್ ಎಂ.ಡಿ.​ ಎಂಬವರಿಗೆ ಪೊಲೀಸರು ಜಾರಿ ಮಾಡಿದ್ದ ನೋಟಿಸ್​ಗೆ ಹೈಕೋರ್ಟ್ ತಡೆ ನೀಡಿದೆ.

ಎಫ್​ಐಆರ್​ ನೀಡದೆಯೂ ವಿಚಾರಣೆ ಹಾಜರಾಗುವಂತೆ ಜಾರಿ ಮಾಡಿದ್ದ ನೋಟಿಸ್​ ಪ್ರಶ್ನಿಸಿ ಸಮೀರ್​ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿ, ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ವಿಚಾರಣೆ ವೇಳೆ, ಇಡೀ ವಿಡಿಯೋದಲ್ಲಿ ಯಾವುದೇ ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತೆ ಮಾತುಗಳನ್ನು ಆಡಿಲ್ಲ. ಆದರೂ, ಎಫ್​ಐಆರ್​ ಪ್ರತಿ ಇಲ್ಲದೇ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ ಎಂದು ಪೀಠಕ್ಕೆ ವಿವರಿಸಿದರು.

ಈ ವೇಳೆ ಪೀಠ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ಜೊತೆಗೆ ಎಫ್​ಐಆರ್​ ಇರಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಿದೆ. ಈ ಅಲ್ಲದೇ, ದೂರು ಯಾರು ನೀಡಿದ್ದಾರೆ ಎಂಬುದು ಗೊತ್ತಿಲ್ಲ. ಆದರೂ ನೋಟಿಸ್​ ನೀಡುವುದಕ್ಕೆ ಹೇಗೆ ಸಾಧ್ಯ ಎಂದು ಪೀಠ ಪ್ರಶ್ನಿಸಿತು.ಇದಕ್ಕೆ ಸರ್ಕಾರದ ಪರ ವಕೀಲರು,” ಅರ್ಜಿದಾರರನ್ನು ಬಂಧಿಸಿಲ್ಲ” ಎಂದು ತಿಳಿಸಿದರು. ಇದಕ್ಕೆ ಪೀಠ, ”ನೋಟಿಸ್​ ಜಾರಿ ಮಾಡಿದ್ದು, ಹಾಜರಾಗದಿದ್ದರೆ ಮುಂದಿನ ನಡೆಯೇ ಬಂಧನ ಆಗುತ್ತಿತ್ತು. ನಿಯಮಗಳ ಪ್ರಕಾರ ನೋಟಿಸ್​ ಜಾರಿ ಮಾಡದಿದ್ದಲ್ಲಿ ಹಾಜರಾಗಲು ಅವಕಾಶ ನೀಡಲಾಗುವುದಿಲ್ಲ” ಎಂದು ಹೇಳಿತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ