Breaking News

ಕಾರವಾರ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆಶರಣಪ್ರಕಾಶ್ ಪಾಟೀಲ್:

Spread the love

ಬೆಂಗಳೂರು: ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ವಿಧಾನಸಭೆಯಲ್ಲಿ ತಿಳಿಸಿದರು.

ಗುರುವಾರ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ದಿನಕರ್ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸೌಲಭ್ಯ ಕಲ್ಪಿಸಲಾಗುತ್ತದೆ. ಕ್ಯಾನ್ಸರ್‌ ಚಿಕಿತ್ಸೆಗೆ ಅವಕಾಶ ನೀಡಲಾಗಿದೆ. ಖಾಲಿ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಇಬ್ಬರು ವೈದ್ಯರು ಮಾತ್ರ ಅರ್ಜಿ ಹಾಕಿದ್ದರು ಎಂದರು.

ತಾಲೂಕು ಕೇಂದ್ರಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುವುದಿಲ್ಲ. ಹಾಗೆಯೇ ಕುಮಟಾ ತಾಲೂಕಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ರೋಗಿಗಳು ಸೂಪರ್ ಸ್ಪೆಷಾಲಿಟಿ ಸೌಲಭ್ಯಕ್ಕಾಗಿ ಮಂಗಳೂರು ಅಥವಾ ಗೋವಾಕ್ಕೆ ಹೋಗಬೇಕಾದ ಪರಿಸ್ಥಿತಿಯಿದೆ. ಹೀಗಾಗಿ, ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಲಾಗುತ್ತಿದೆ. ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗಳು ಪೂರಕವಾಗಿ ಬೇಕಾಗುತ್ತದೆ. ಈಗಾಗಲೇ ಮೈಸೂರು, ಕಲಬುರಗಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಿದ್ದು, ಬೇರೆ ಬೇರೆ ಕಡೆಯೂ ಮಾಡಲಾಗುವುದು ಎಂದು ಸಚಿವರು ಹೇಳಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ