ಎಲ್ಲಾ ವಲಯಗಳಿಗೆ ನ್ಯಾಯ ದೊರಕುವ ಜನಪರ ಬಜೆಟ್
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಎಲ್ಲ ವಲಯಗಳನ್ನು ಒಗ್ಗೂಡಿಸಿ, ಸಮಗ್ರ ಅಭಿವೃದ್ಧಿಗೆ ಒತ್ತು ನೀಡುವ ಜನಪರ ಬಜೆಟ್ ಮಂಡಿಸಿದ್ದಾರೆ.
ಉಚಿತ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನ ಮೀಸಲಾಗಿರುವುದರಿಂದ, ಉಳಿದ ಭಾಗದಲ್ಲಿ ಸಮತೋಲನ ಕಾಯ್ದುಕೊಂಡು ಎಲ್ಲ ವರ್ಗಗಳಿಗೂ ನ್ಯಾಯ ದೊರಕಿಸುವ ಪ್ರಯತ್ನ ಮಾಡಿದ್ದಾರೆ.
ಚಿಕ್ಕೋಡಿ ಲೋಕಸಭೆ ಕ್ಷೇತ್ರವನ್ನು ಒಳಗೊಂಡ ಬೆಳಗಾವಿ ಜಿಲ್ಲೆಯ ಅಭಿವೃದ್ದಿಗೆ ವಿಶೇಷ ಒತ್ತು:
2025-26 ರ ಬಜೆಟ್ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನದಿಂದ ಸಮತೋಲನಮಯ ಮತ್ತು ಜನಪರ ಬಜೆಟ್ ಇದಾಗಿದೆ. ಈ ಸಂದರ್ಭದಲ್ಲಿ ತಮ್ಮ ಜೀವನದಲ್ಲಿ 16 ನೆಯ ಬಜೆಟ್ ಮಂಡಿಸಿ ವಿಶೇಷ ದಾಖಲೆ ಸೃಷ್ಟಿಸಿದ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಅವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.
Laxmi News 24×7