ಸರ್ವವ್ಯಾಪಿ, ಸರ್ವಸ್ಪರ್ಶಿ ಬಜೆಜ್ : ರಾಹುಲ್ ಜಾರಕಿಹೊಳಿ
ಬೆಳಗಾವಿ: ರಾಜ್ಯದ ಸಮಗ್ರ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಪರ ಬಜೆಟ್ ಮಂಡಿಸಿದ್ದಾರೆ. ಸರ್ವವ್ಯಾಪಿ, ಸರ್ವಸ್ಪರ್ಶಿ ಬಜೆಜ್ ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ರಾಹುಲ್ ಜಾರಕಿಹೊಳಿ ಹೇಳಿದರು.
ಈ ಕುರಿತು ಪ್ರಕಟಣೆ ತಿಳಿಸಿದ ಅವರು, ಇದು ಜನಪರ ಬಜೆಟ್, ಎಲ್ಲಾ ವರ್ಗಕ್ಕೂ ಅನುಕೂಲವಾಗಲಿದೆ. ಎಲ್ಲಾ ಸಮುದಾಯಕ್ಕೆ ಹಾಗೂ ಕೃಷಿ , ಶಿಕ್ಷಣ ಕ್ಷೇತ್ರಕ್ಕೆ ಬಹಳಷ್ಟು ಒತ್ತು ನೀಡಿದ್ದಾರೆ.
ರೈತರು, ಬಡವರು, ಹಿಂದುಳಿದವರು, ಮಹಿಳೆಯರು, ಯುವಕರು, ಉದ್ಯಮಿದಾರರು, ವಿದ್ಯಾರ್ಥಿಗಳು ಹೀಗೆ ಎಲ್ಲ ರಂಗ, ಎಲ್ಲ ವರ್ಗದವರ ಹಿತ ಇಲ್ಲಿದೆ.
ಯಾವುದೇ ಕ್ಷೇತ್ರವನ್ನೂ ಕಡೆಗಣಿಸದೇ ಸಮಗ್ರ ಅಭಿವೃದ್ಧಿಗಾಗಿ ಒತ್ತು ನೀಡಿದ್ದಾರೆ ಎಂದು ರಾಹುಲ್ ಜಾರಕಿಹೊಳಿ ಅವರು ಬಜೆಜ್ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು.