Breaking News

ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮವಾಗಿ ಕಬ್ಬಿಣದ ಅದಿರಿನ ಸಾಗಾಣೆ ಆನಂದ್ ಸಿಂಗ್ ಸೇರಿದಂತೆ ಗೋವಾ ಮಾಜಿ ಸಚಿವ ಖುಲಾಸೆ

Spread the love

ಬೆಂಗಳೂರು, (ಮಾರ್ಚ್​ 07): ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮವಾಗಿ ಕಬ್ಬಿಣದ ಅದಿರಿನ ಸಾಗಾಣೆ ಪ್ರಕರಣದ  ಆರೋಪಿಗಳಾದ ಮಾಜಿ ಸಚಿವ ಆನಂದ್ ಸಿಂಗ್​ ಅವರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಇಂದು (ಮಾರ್ಚ್​ 07) ಆರೋಪಿಗಳಾದ ಆನಂದ್ ಸಿಂಗ್ ಹಾಗೂ ಗೋವಾ ಮಾಜಿ ಸಚಿವ ರೋಹನ್ ಕೌಂಟೆ ಸೇರಿದಂತೆ 16 ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ಆನಂದ್ ಸಿಂಗ್, ಗೋವಾ ಸಚಿವ ರೋಹನ್ ಕೌಂಟೆ ಆರೋಪಿಯಾಗಿದ್ದರು. ಈ ಪ್ರಕರಣ ವಾದ ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದಿಗೆ ತೀರ್ಪು ಕಾಯ್ದಿರಿಸಿತ್ತು.

ಅದರಂತೆ ಇಂದು ಜನಪ್ರತಿನಿಧಿಗಳ ಕೋರ್ಟ್​​, ತೀರ್ಪು ಪ್ರಕಟಿಸಿದ್ದು, ಆನಂದ್​ ಸಿಂಗ್​ ಕೇಸ್​ನಿಂದ ಖುಲಾಸೆಗೊಂಡಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ