Breaking News

ರೈತ ಸಂಘಟನೆಗಳ ಹಿಂದೆ ಕಾಂಗ್ರೆಸ್ ತರೆಮರೆಯ ರಾಜಕಾರಣ ಮಾಡುತ್ತಿದೆ:H.D.K.

Spread the love

ಬೆಂಗಳೂರು:  ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ದ ಕಿಡಿಕಾರಿದ್ದು,  ಭೂ ಸುಧಾರಣೆ ಕಾಯ್ದೆ ವಿಚಾರವಾಗಿ  ಅನಗತ್ಯ ಹೋರಾಟ ಮಾಡುತ್ತಿರುವ ಕೆಲ ರೈತ ಸಂಘಟನೆಗಳ ಹಿಂದೆ ಕಾಂಗ್ರೆಸ್ ತರೆಮರೆಯ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

 ಕಾಂಗ್ರೆಸ್‌ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಜೆಡಿಎಸ್‌ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ. ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್‌ ಈಗ ಅಡಗಿ ಕುಳಿತಿದೆ. ಅವರ ಮೂಲಕ ರಾಜಕೀಯದ ಹೇಳಿಕೆಗಳನ್ನು ಕೊಡಿಸುತ್ತಿದೆ. ಈ ಮೂಲಕ ಕಾಂಗ್ರೆಸ್‌ ರೈತ ಸಂಘಗಳನ್ನೂ ಒಡೆಯುವ ಕೆಲಸಕ್ಕೆ ಕೈ ಹಾಕಿದೆ ಎಂದು ಆರೋಪಿಸಿದರು.

ಇವತ್ತಿನ ಕೆಲ ರೈತ ಸಂಘಗಳು ರೈತರಿಗಾಗಿ ಹೋರಾಡುವುದನ್ನು ಬಿಟ್ಟು ಕಾಂಗ್ರೆಸ್‌ನಂಥ ಸಮಾಜವನ್ನು ಒಡೆಯುವ, ಜನರ ಆಶಯಗಳಿಗೆ ವಿರುದ್ಧವಾದ ಚಿಂತನೆಗಳನ್ನು ಹೊಂದಿರುವ ಪಕ್ಷದ ಪರವಾಗಿ ಕೆಲಸ ಮಾಡುತ್ತಿವೆ ಎಂದು ಕಿಡಿಕಾರಿದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ