Breaking News

ಭಾರತಕ್ಕೆ ಚಾಂಪಿಯನ್ ಟ್ರೋಫಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ*

Spread the love

ಭಾರತಕ್ಕೆ ಚಾಂಪಿಯನ್ ಟ್ರೋಫಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ*
*ಬೆಂಗಳೂರು-* ದುಬೈನಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ವಿರುದ್ಧ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಅಭೂತಪೂರ್ವ ಗೆಲುವು ದಾಖಲಿಸಿ ಚಾಂಪಿಯನ್ ಕಿರೀಟ್ ಧರಿಸಿರುವುದಕ್ಕೆ ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿ, ಟೀಂ ಇಂಡಿಯಾವನ್ನು ಅಭಿನಂದಿಸಿದ್ದಾರೆ.
ಈ ಮೂಲಕ ಒಟ್ಟು ಮೂರು ಬಾರಿ ಚಾಂಪಿಯನ್ ಟ್ರೋಫಿ ಪಡೆದಿರುವ ಭಾರತವು ವಿಶ್ವದ ಮೊದಲ ತಂಡವಾಗಿದೆ.
ಭಾನುವಾರದಂದು ದುಬೈ ಕ್ರೀಡಾಂಗಣದಲ್ಲಿ ಜರುಗಿದ ಕಿವಿಸ್ ಎದುರು ಫೈನಲ್ ಫೈಟ್ ನಲ್ಲಿ ಕೊನೆಗೂ ಕಿವೀಸ್ ವಿರುದ್ಧ ಗೆಲ್ಲುವ ಮೂಲಕ ಭಾರತ ಚಾಂಪಿಯನ್ ಪಟ್ಟಕ್ಕೇರಿತು. ಈ ಮೂಲಕ ಕಳೆದ ೨೫ ವರ್ಷಗಳ ಹಿಂದಿನ ಸೇಡು ತೀರಿಸಿಕೊಂಡಿದೆ.
ಅಲ್ಲದೇ ಈ ಚಾಂಪಿಯನ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತವು ಒಂದೂ ಪಂದ್ಯವನ್ನು ಸೋಲದೇ ಅಜೇಯವಾಗಿ ಫೈನಲ್ ಪ್ರವೇಶ ಮಾಡಿ ಕಿವೀಸ್ ವಿರುದ್ಧ ೪ ವಿಕೆಟ್ ಗೆಲುವು ಪಡೆದುಕೊಂಡಿತು.
ಟೀಂ ಇಂಡಿಯಾ ಹೊಸ ಚಾಂಪಿಯನ್ ಆಗುತ್ತಿದ್ದಂತೆಯೇ ದೇಶಾದ್ಯಂತ ಸಂಭ್ರಮ ಮುಗಿಲು ಮುಟ್ಟಿದೆ.
ಪಟಾಕಿ ಸಿಡಿಸಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

Spread the love

About Laxminews 24x7

Check Also

ಇದು ಮುಸ್ಲಿಮರ ಬಜೆಟ್‌:ಬಿಜೆಪಿ ನಾಯಕರ ಕಿಡಿ

Spread the loveಬೆಂಗಳೂರು: “ಕಾಂಗ್ರೆಸ್‌ ಸರ್ಕಾರ ಜನ ವಿರೋಧಿ ಹಾಗೂ ಮುಸ್ಲಿಮರ ಬಜೆಟ್‌ ಮಂಡಿಸಿದೆ. ಜೊತೆಗೆ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ