Breaking News

ಕಂಡಕ್ಟರ್ ಮೇಲಿನ ಹಲ್ಲೆ ಮಾಸುವ ಮುನ್ನವೇ…ಗ್ರಾ.ಪಂ ಕಾರ್ಯದರ್ಶಿ ಮೇಲೆ ಹಲ್ಲೆ…!!!

Spread the love

ಕಂಡಕ್ಟರ್ ಮೇಲಿನ ಹಲ್ಲೆ ಮಾಸುವ ಮುನ್ನವೇ…ಗ್ರಾ.ಪಂ ಕಾರ್ಯದರ್ಶಿ ಮೇಲೆ ಹಲ್ಲೆ…!!!
ಎಂ.ಇ.ಎಸ್. ಸದಸ್ಯರ ವಿರುದ್ಧ ಕ್ರಮಕೈಗೊಳ್ಳದಿದ್ದರೇ ಉಗ್ರ ಹೋರಾಟ; ಮಹಾದೇವ ತಳವಾರ
ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯ ಮೇಲೆ ಹಲ್ಲೆ ಮಾಡಿರುವ ಗ್ರಾಮ ಪಂಚಾಯತ ಸದಸ್ಯ, ಆತನ ಮಗ ಮತ್ತು ಆತನೊಂದಿಗಿದ್ದವರ ವಿರುದ್ಧ ಸೂಕ್ಷ ಕ್ರಮ ಕೈಗೊಂಡು ಕನ್ನಡಿಗ ಅಧಿಕಾರಿಗೆ ನ್ಯಾಯ ಒದಗಿಸಬೇಕೆಂದು ಕಿತ್ತೂರು ಕರ್ನಾಟಕ ಸೇನೆಯ ಅಧ್ಯಕ್ಷ ಮಹಾದೇವ ತಳವಾರ ಅವರು ಆಗ್ರಹಿಸಿದ್ದಾರೆ.
ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ನಾಗಪ್ಪ ಕೊಡಲಿ ಅವರು ಅಕ್ರಮವಾಗಿ ಪಹಣಿ ಪತ್ರಿಕೆ ನೀಡದ ಹಿನ್ನೆಲೆ ಗ್ರಾಮ ಪಂಚಾಯತ ಸದಸ್ಯ ಚೇತನ್ ಪಾಟೀಲ್, ಎಂ.ಇ.ಎಸ್’ನ ವಿಕ್ರಮ ಯಳ್ಳೂರಕರ ಮತ್ತು ಶಿವು ಎನ್ನುವವರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಕಂಡಕ್ಟರ್ ಮೇಲಿನ ಹಲ್ಲೆ ಮಾಸುವ ಜಿಲ್ಲೆ ಅಂಬೇವಾಡಿಯಲ್ಲಿ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಲಾಗಿದ್ದು,
ಇದು ಅಕ್ಷಮ್ಯ ಅಪರಾಧವಾಗಿದೆ.
ಎಲ್ಲ ಕನ್ನಡ ಸಂಘಟನೆಗಳು ಉಗ್ರ ಹೋರಾಟ ಕೈಗೊಳ್ಳುವ ಮೊದಲೇ ಪುಂಡತನ ಮೆರೆದ ಗ್ರಾಮ ಪಂಚಾಯತ ಸದಸ್ಯ ಚೇತನ್ ಪಾಟೀಲ್ ಸದಸ್ಯತ್ವ ರದ್ಧುಗೊಳಿಸಿ 6 ವರ್ಷದ ವರೆಗೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಕ್ರಮಕೈಗೊಳ್ಳಬೇಕೆಂದು ಕಿತ್ತೂರು ಕರ್ನಾಟಕ ಸೇನೆಯ ಅಧ್ಯಕ್ಷ ಮಹಾದೇವ ತಳವಾರ ಅವರು ಆಗ್ರಹಿಸಿದ್ದಾರೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ