Breaking News

ಹುಬ್ಬಳ್ಳಿಯಲ್ಲಿ ನಕಲಿ ಆಹಾರ ಇಲಾಖೆ ಅಧಿಕಾರಿಗಳ ಹಾವಳಿ

Spread the love

ಹುಬ್ಬಳ್ಳಿ, ಮಾರ್ಚ್​ 12: ಕಳೆದ ಕೆಲ ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ (Hubballi) ನಕಲಿ ‌ಮದ್ಯ ತಯಾರಿಕೆ ಗ್ಯಾಂಗ್ ಅಬಕಾರಿ ಅಧಿಕಾರಿಗಳ ಬಲೆಗೆ ಬಿದ್ದಿದ್ದರು. ಇದಕ್ಕೂ ಮುನ್ನ ಅಂಗನವಾಡಿ ಮಕ್ಕಳ ಪೌಷ್ಠಿಕ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪದ ಮೇಲೆ ಹಲವರನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ, ಹುಬ್ಬಳ್ಳಿಯಲ್ಲಿ ನಕಲಿ ಅಧಿಕಾರಿಗಳು ತಲೆ ಎತ್ತಿದ್ದಾರೆ.ಹಣ ಮಾಡೋ ಉದ್ದೇಶಕ್ಕೆ ಕೆಲವರು ಅಧಿಕಾರಿಗಳ ಸೋಗಿನಲ್ಲಿ ರೋಲ್ ಕಾಲ್​ಗೆ ಇಳದಿದ್ದಾರೆ. ಆಹಾರ ಇಲಾಖೆ ಹೆಸರಿನಲ್ಲಿ ದುರ್ಗದ ಬೈಲ್​ನಲ್ಲಿನ ಕಿರಾಣಿ ಅಂಗಡಿಗಳ ಮೇಲೆ ಏಕಾಏಕಿ ದಾಳಿ ಮಾಡಿದ್ದ ನಕಲಿ ಅಧಿಕಾರಿಗಳನ್ನು (Fake Food Officers) ಪೊಲೀಸರು ಬಂಧಿಸಿದ್ದಾರೆ.

ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿದ ಮಂಜುನಾಥ ಹಾಗೂ ಲಕ್ಷ್ಮಣ ಹಣಕ್ಕೆ ಬೇಡಿಕೆ ಇಟ್ಟಿದ್ದರಂತೆ. ಹಣ ಕೇಳುತ್ತಲೇ ಕಿರಾಣಿ ಅಂಗಡಿ ಮಾಲೀಕರು ನಕಲಿ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡಿದ್ದಾರೆ. ಕೊನೆಗೆ ಇವರಿಬ್ಬರು ನಕಲಿ ಅಧಿಕಾರಿಗಳು ಎಂದು ಅಂಗಡಿ ಮಾಲೀಕರಿಗೆ ತಿಳಿಯುತ್ತಿದ್ದಂತೆ ಲಕ್ಷ್ಮಣ ಅಲ್ಲಿಂದ ಕಾಲ್ಕಿತ್ತಿದ್ದಾನೆ. ನಕಲಿ ಅಧಿಕಾರಿ ಮಂಜುನಾಥನನ್ನು ಕಿರಾಣಿ ಅಂಗಡಿ ಮಾಲೀಕರು ಹುಬ್ಬಳ್ಳಿಯ ಘಂಟಿಕೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ನಕಲಿ ಅಧಿಕಾರಿಗಳ ಗ್ಯಾಂಗ್​ಗೆ ಕಿರಾಣಿ ಅಂಗಡಿ ಮಾಲೀಕರು ರೋಸಿ ಹೋಗಿದ್ದರು. ಕಳೆದ ಕೆಲ ದಿನಗಳಿಂದ ಒಂದಲ್ಲಾ ಒಂದು ಅಂಗಡಿ ಇವರ ಟಾರ್ಗೆಟ್ ಆಗಿತ್ತು. ಅಂಗಡಿಗೆ ಹೋಗಿ, ಆಹಾರ ಇಲಾಖೆ ಅಧಿಕಾರಿಗಳು ಅಂತ ಸುಳ್ಳು ಹೇಳಿ, ಬಿಲ್ ಕೇಳುವುದು, ಲೇಬಲ್ ಬಗ್ಗೆ ವಿಚಾರಣೆ ಮಾಡುವುದು, ಅದು ಸರಿ ಇಲ್ಲ, ಇದು ಸರಿ ಇಲ್ಲ ಅಂತ ಹೇಳಿ, ಹಣ ಕೇಳುತ್ತಿದ್ದರು. ಆರೋಪಿಗಳು ಕೇವಲ ಕಿರಾಣಿ ಅಂಗಡಿಗಳ ಮೇಲೆ ದಾಳಿ ಮಾಡಿ, ಮಾಲೀಕರಿಂದ ಹಣ ವಸೂಲಿ‌ ಮಾಡತಿದ್ದರಂತೆ. ನಕಲಿ ಅಧಿಕಾರಿಗಳ ಬಂಡವಾಳ ಬಯಲಾಗುತ್ತಲೇ ಕಿರಾಣಿ ಅಂಗಡಿ ಮಾಲೀಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ