Breaking News

ಗ್ಯಾರಂಟಿ ಅನುಷ್ಠಾನ ಸಮಿತಿಗೆ ವಿರೋಧ….

Spread the love

ಇಂದು ಮತ್ತೇ ಸದನದ ಭಾವಿಗಿಳಿದು ಪ್ರತಿಭಟಿಸಿದ ಬಿಜೆಪಿ ಸದಸ್ಯರು
ಸದನದ ಕಾರ್ಯಕಲಾಪವನ್ನು ಮುಂದೂಡಿದ ಸಭಾಪತಿಗಳು
ಇಂದು ವಿಧಾನಮಂಡಳದ ಅಧಿವೇಶನದ ಆರಂಭದಲ್ಲೇ ಬಿಜೆಪಿ ಸದಸ್ಯರು ಗ್ಯಾರಂಟಿ ಅನುಷ್ಠಾನಕ್ಕೆ ಶಾಸಕರ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಸಮಿತಿ ಏಕೆ ಬೇಕು ಎಂದು ಪ್ರಶ್ನಿಸಿ ಮತ್ತೇ ಸದನದ ಭಾವಿಗಿಳಿದು ಪ್ರತಿಭಟಿಸಿದರು.

ಇಂದು ವಿಧಾನಮಂಡಳದ ಅಧಿವೇಶನದ ಆರಂಭದಲ್ಲೇ ಬಿಜೆಪಿ ಸದಸ್ಯರು ಗ್ಯಾರಂಟಿ ಅನುಷ್ಠಾನಕ್ಕೆ ಶಾಸಕರ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಸಮಿತಿ ಏಕೆ ಬೇಕು. ತೆರಿಗೆ ಹಣದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಿಗೆ ಸಾವಿರಾರು ರೂಪಾಯಿ ಸಂಬಳ ನೀಡಲು ಸರ್ಕಾರಕ್ಕೆ ನಾಚಿಕೆಯಾಗಬೇಕು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರದ್ದುಗೊಳಿಸಬೇಕು ಎಂದು ಪಟ್ಟು ಹಿಡಿದು ಘೋಷಣೆ ಕೂಗುತ್ತಿದ್ದರು. ಧರಣಿ ವಾಪಸ್ ಪಡೆದು ಕಲಾಪ ನಡೆಯಲು ಅವಕಾಶ ಮಾಡಿಕೊಡಿ, ಸರ್ಕಾರ ನಿನ್ನೆಯೇ ಉತ್ತರ ನೀಡಿದೆ. ಸದಸ್ಯರು ಸಹಕರಿಸಿ ಎಂದು ಸ್ಪೀಕರ್ ಯು.ಟಿ.ಖಾದರ್ ಮನವಿ ಮಾಡಿದರು.

ಈ ವೇಳೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ”ಜನರ ತೆರಿಗೆ ಹಣದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ವೇತನ ನೀಡಲಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಕ ಮಾಡುವ ಮೂಲಕ ಶಾಸಕರನ್ನು ಅವಮಾನಿಸಲಾಗಿದೆ. ಪಕ್ಷದ ಕಾರ್ಯಕರ್ತರನ್ನು ಸರ್ಕಾರಿ ಗ್ಯಾರಂಟಿ ಸಮಿತಿಗೆ ನೇಮಕ ಮಾಡಿ, ವೇತನ ನೀಡುತ್ತಿರುವುದು ಕಾನೂನುಬಾಹಿರ, ಇದಕ್ಕೆ ನಮ್ಮ ಆಕ್ಷೇಪಣೆಯೇ ಹೊರತು, ಸದನ ನಿಲ್ಲಿಸುವುದಕ್ಕಲ್ಲ. ನಮಗೂ ಕಲಾಪ ನಡೆಯಬೇಕಿದೆ” ಎಂದು ಹೇಳಿದರು.

ಗ್ಯಾರಂಟಿ ಯೋಜನೆ ಮತ್ತು ಸಮಿತಿಗೆ ವಿರೋಧವಿಲ್ಲ. ಆದರೇ, ಶಾಸಕರ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಸಮಿತಿ ಏಕೆ ಬೇಕು ಎಂದು ಸರ್ಕಾರದ ನೀತಿಯನ್ನು ಖಂಡಿಸಿ ಸದನದ ಭಾವಿಗಿಳಿದು ಪ್ರತಿಭಟಿಸಲು ಆರಂಭಿಸಿದರು. ನಿನ್ನೆಯಿಂದ ಈ ವಿಷಯವಾಗಿ ಕಲಾಪಕ್ಕೆ ಅಡ್ಡಿಯಾಗಿದೆ. ರಾಜ್ಯದ ಹಿತದೃಷ್ಟಿಯಿಂದ ಇದು ಒಳ್ಳೆಯದಲ್ಲ. ಬಜೆಟ್ ಅಧಿವೇಶನದ ಉಳಿದ ಕಲಾಪಗಳು, ವಿಶೇಷವಾಗಿ ಚರ್ಚೆ ಮತ್ತು ಜನರ ಸಮಸ್ಯೆಗಳ ಚಿಂತನೆ ನಡೆಸಬೇಕಾಗಿರುವುದು ಅಗತ್ಯವಾಗಿದೆ.

ಹಾಗಾಗಿ, ಸರ್ಕಾರ ಇದಕ್ಕೊಂದು ಪರಿಹಾರ ಕಂಡುಕೊಳ್ಳಬೇಕು. ಪ್ರತಿಪಕ್ಷದ ಧರಣಿ ಅಂತ್ಯ ಕಾಣಬೇಕು” ಎಂದು ಸ್ಪೀಕರ್ ಯು.ಟಿ.ಖಾದರ್ ಸೂಚಿಸಿ ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಿದರು.


Spread the love

About Laxminews 24x7

Check Also

ಬಾಲಕಿಯನ್ನು ಪುಸಲಾಯಿಸಿ ಗರ್ಭಿಣಿ ಮಾಡಿದ 2 ಮಕ್ಕಳ ತಂದೆ ಅರೆಸ್ಟ್

Spread the loveಬೆಳಗಾವಿ, (ಮಾರ್ಚ್​ 11): ಎರಡು ಮಕ್ಕಳಿರುವ ವ್ಯಕ್ತಿಯೋರ್ವ ಅಪ್ರಾಪ್ತೆಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿರುವ ಘಟನೆ ಬೆಳಗಾವಿಯ ಕುಲಗೋಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ