ಬೆಂಗಳೂರು, (ಮಾರ್ಚ್ 13): ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ಪ್ರಮುಖ ಕಾಮಗಾರಿ ನಡೆಸುವ ಐದು ಇಲಾಖೆಗಳಲ್ಲಿ 40 ಪರ್ಸೆಂಟ್ ಭ್ರಷ್ಟಾಚಾರ(40 percent commission )ನಡೆಯುತ್ತಿದೆ ಎಂಬ ರಾಜ್ಯ ಗುತ್ತಿಗೆದಾರರ ಸಂಘದ ಆರೋಪ ಕುರಿತ ತನಿಖೆಗೆ ರಚಿಸಲಾಗಿದ್ದ ನಿವೃತ್ತಿ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ (Nagamohan Das) ನೇತೃತ್ವದ ವಿಚಾರಣಾ ಆಯೋಗವು 20,000 ಪುಟಗಳ ಬೃಹತ್ ತನಿಖಾ ವರದಿಯನ್ನು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಿದೆ.
ಬಿಜೆಪಿ ಅವಧಿಯಲ್ಲಿನ ಕಾಮಗಾರಿಗಳ ಬಗ್ಗೆ ತನಿಖಾ ವರದಿಯನ್ನ ಸಲ್ಲಿಸಲಾಗಿದ್ದು, ಪ್ರಮುಖ 5 ಇಲಾಖೆಗಳಲ್ಲಿ ನಡೆದ ಎಲ್ಲಾ ಕಾಮಗಾರಿಗಳ ಬಗ್ಗೆ ಆಯೋಗ ಮಾಹಿತಿ ಕಲೆ ಹಾಕಿದೆ. ಹೀಗೆ ಒಟ್ಟು 20 ಸಾವಿರ ಪುಟಗಳ ವರದಿಯನ್ನ ಆಯೋಗ ಸಲ್ಲಿಸಿದ್ದು ಮಹತ್ವ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಕಮಿಷನ್ ಕದನ ಮತ್ತೆ ತಾರಕಕ್ಕೇರಿದ್ದು, ಈ ವರದಿ ಇಟ್ಟುಕೊಂಡು ಕಾಂಗ್ರೆಸ್, ಬಿಜೆಪಿ ಅವಧಿಯಲ್ಲಿನ 40% ಕಮಿಷನ್ ಆರೋಪವನ್ನ ಕೆದಕಲು ಸಜ್ಜಾಗಿದೆ.