Breaking News

ಡಿಕೆ ಶಿವಕುಮಾರ್ ಆಯೋಜಿಸಿದ ಔತಣಕೂಟದಲ್ಲಿ ಇಬ್ಬರು ಬಿಜೆಪಿ ಶಾಸಕರು

Spread the love

ಬೆಂಗಳೂರು, (ಮಾರ್ಚ್​ 13): ಕೆಪಿಸಿಸಿ ಅಧ್ಯಕ್ಷರಾಗಿ (KPCC President)  ಜುಲೈ 2ಕ್ಕೆ ಐದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌  (DK Shivakumar) ಮೂರವರೇ ತಿಂಗಳು ಮೊದಲೇ ಔತಣಕೂಟ (Dinner) ಏರ್ಪಡಿಸಿದ್ದಾರೆ. ಇಂದು (ಮಾರ್ಚ್ 13) ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಡಿಕೆಶಿ ಭೋಜನಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್‌ನ ಶಾಸಕರು, ಸಚಿವರು ಭಾಗವಹಿಸಿದರು. ಈ ವೇಳೆ ಡಿಕೆ ಶಿವಕುಮಾರ್​​ಗೆ ಶುಭಾಶಯ ಕೋರಿ ಔತಣಕೂಟ ಸ್ವೀಕರಿಸಿದರು. ಇನ್ನು ಡಿಕೆಶಿ ಆಯೋಜಿಸಿರುವ ಈ ಔತಣಕೂಟದಲ್ಲಿ ಬಿಜೆಪಿ ಶಾಸಕರಾದ ಎಸ್​ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ 5 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸಚಿವರು, ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಔತಣಕೂಟ ಏರ್ಪಡಿಸಿದ್ದಾರೆ. ಆದ್ರೆ, ಈ ಕಾಂಗ್ರೆಸ್ ಔತಣಕೂಟದಲ್ಲಿ ಬೆಂಗಳೂರಿನ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ ಹಾಗೂ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದ ಶಿವರಾಮ್ ಹೆಬ್ಬಾರ್ ಸಹ ಭಾಗವಹಿಸಿದ್ದು, ಡಿಕೆಶಿಗೆ ಶುಭಾಶಯ ತಿಳಿಸಿ ಔತಣಕೂಟವನ್ನು ಸ್ವೀಕರಿಸಿದ್ದಾರೆ. ಈ ಮೂಲಕ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ