ಮೈಸೂರು : ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಕೆಲಸ ಮಾಡಲು ಜನರು ಅಷ್ಟಾಗಿ ಆಸಕ್ತಿ ತೋರುತ್ತಿಲ್ಲ. ಆದರೂ, ಕೂಲಿ ಕಾರ್ಮಿಕರನ್ನು ಕೆರೆಗಳ ಹೊಳೆತ್ತುವ ಕೆಲಸ ಮಾಡಿಸುತ್ತಿದ್ದೇವೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಉಕೇಶ್ ಕುಮಾರ್ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿರುವ ಜಲಾಶಯಗಳಲ್ಲಿ ಈಗಾಗಲೇ ಸಾಕಷ್ಟು ನೀರು ಲಭ್ಯವಿದ್ದು, ಯಾವುದೇ ರೀತಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸೂಚಿಸಲಾಗಿದೆ. ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದ ರೀತಿಯಲ್ಲಿ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗುವ ಸುಮಾರು 94 ಗ್ರಾಮಗಳನ್ನು ಸರ್ವೇ ಮೂಲಕ ಗುರುತಿಸಲಾಗಿದೆ. ಅಗತ್ಯವಿದ್ದರೇ ಬಾವಿಗಳ ಮೂಲಕ ಕುಡಿಯುವ ನೀರಿನ ಒದಗಿಸಲು ಸರ್ಕಾರ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸಹಯೋಗದೊಂದಿಗೆ ಸಮಸ್ಯೆ ಎದುರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದರು.ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಕೆಲಸ ಮಾಡಲು ಜನರು ಅಷ್ಟಾಗಿ ಆಸಕ್ತಿ ತೋರುತ್ತಿಲ್ಲ. ಆದರೂ, ನಾವು ಕೂಲಿ ಕಾರ್ಮಿಕರನ್ನು ಬಳಸಿಕೊಂಡು ಅಂತರ್ಜಲ ಸಂರಕ್ಷಣೆಗಾಗಿ ಕೆರೆಗಳ ಹೊಳೆತ್ತುವ ಕೆಲಸ ಮಾಡುತ್ತಿದ್ದೇವೆ. ಮಳೆಗಾಲ ಆರಂಭವಾಗುವವರೆಗೆ ಗ್ರಾಮೀಣ ಭಾಗದಲ್ಲಿ ಅಂತರ್ಜಲ ಅಭಿವೃದ್ಧಿಗೆ ಕೆರೆಗಳ ಅಭಿವೃದ್ಧಿ ಕಾರ್ಯ ಮಾಡುವ ಮೂಲಕ ಮಳೆಗಾಲದಲ್ಲಿ ಹೆಚ್ಚಿನ ನೀರು ಸಂಗ್ರಹ ಮಾಡುವ ಗುರಿ ಹೊಂದಿದ್ದೇವೆ. ಈಗಾಗಲೇ ಶೇ.96ಹೆಚ್ಚು ಸಾಧನೆ ಮಾಡಿದ್ದು, ಈ ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಲಾಗಿದೆ ಎಂದು ಉಕೇಶ್ ಕುಮಾರ್ ತಿಳಿಸಿದರು.