Breaking News

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಮತ್ತು ಬೆಂಗಳೂರು ಯೋಜನೆಗಳ ಬಗ್ಗೆ ವಿವರವಾಗಿ ಉತ್ತರ ನೀಡಿದ ಡಿ.ಕೆ.ಶಿ

Spread the love

ಬೆಂಗಳೂರು: “ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಡಿ ಆಲಮಟ್ಟಿ ಜಲಾಶಯ ಎತ್ತರಿಸಲು ಆಗಬೇಕಾದ ಭೂಸ್ವಾಧೀನ, ಕಲ್ಪಿಸಬೇಕಾದ ಪರಿಹಾರ ಹಾಗೂ ಪರಿಷ್ಕೃತ ಮೊತ್ತಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಅನುಮತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ವಿಧಾನ ಪರಿಷತ್​ನಲ್ಲಿ ಬಿಜೆಪಿ ಸದಸ್ಯರಾದ ಪಿ.ಎಚ್.ಪೂಜಾರ್ ಹಾಗೂ ಹನುಮಂತ ರುದ್ರಪ್ಪ ನಿರಾಣಿ ಕೇಳಿದ ಪ್ರಶ್ನೆಗೆ ಡಿ.ಕೆ.ಶಿವಕುಮಾರ್​ ಉತ್ತರಿಸಿದರು.

“ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ಕ್ಕೆ ಸಂಬಂಧಿಸಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಂತ್ರಸ್ತರೊಂದಿಗೆ ಚರ್ಚಿಸಲಾಗಿದೆ. ಚರ್ಚೆಯ ವೇಳೆ ಭೂಸ್ವಾಧೀನ ಹಾಗೂ ಪುನರ್‌ವಸತಿ ಕುರಿತಂತೆ ಕೈಗೊಂಡ ನಿರ್ಣಯಗಳು, ಒಪ್ಪಂದ ಹಾಗೂ ಯೋಜನೆಗೆ ಪರಿಷ್ಕೃತ ಅಂದಾಜು ಮೊತ್ತದ ಬಗ್ಗೆ ಕ್ಯಾಬಿನೆಟ್​ನಲ್ಲಿ ಚರ್ಚಿಸಿ ಅನುಮೋದನೆ ಪಡೆಯಲಾಗುತ್ತದೆ. ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

“ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಲ್ಲಿ 1,33,867 ಲಕ್ಷ ಎಕರೆ ಭೂಸ್ವಾಧೀನವಾಗಲಿದೆ. ಈ ಪೈಕಿ 28,903 ಎಕರೆ ಸ್ವಾಧೀನಪಡಿಸಿಕೊಳ್ಳಲಾಗಿದೆ. ಬಾಕಿ 1,04,964 ಎಕರೆ ಭೂಮಿಯನ್ನು ಹಂತ-ಹಂತವಾಗಿ ಸ್ವಾಧೀನಪಡಿಸಿಕೊಂಡು ಸಂತ್ರಸ್ತರಿಗೆ ಪರಿಹಾರ ನೀಡಲಾಗುವುದು. ಸದ್ಯ ಶೇ.53ರಷ್ಟು ಮಾತ್ರ ಪ್ರಗತಿ ಸಾಧಿಸಲಾಗಿದೆ” ಎಂದರು.

“ಆಲಮಟ್ಟಿ ಜಲಾಶಯ ನೀರಿನ ಸಂಗ್ರಹಣೆ ಮಟ್ಟ 519.60 ಮೀಟರ್​ನಿಂದ 524.256 ಮೀಟರ್​​ಗೆ ಅಧಿಸೂಚನೆ ಹೊರಡಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಕೃಷ್ಣಾ ಮೇಲ್ದಂಡೆ ಯೋಜನೆ ಅಂತಿಮ ತೀರ್ಪಿನ ಬಗ್ಗೆ ಕೇಂದ್ರವು ಗೆಜೆಟ್ ನೋಟಿಫಿಕೇಷನ್ ಇನ್ನಷ್ಟೇ ಹೊರಡಿಸಬೇಕಿದೆ” ಎಂದು ಹೇಳಿದರು.

“ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ” ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ