Breaking News

ಬೈಕ್​ ಡಿಕ್ಕಿ ಹೊಡೆದ ಪರಿಣಾಮ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಗಾಯಗೊಂಡಿದ್ದಾರೆ.

Spread the love

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ವಿಧಾನಸಭೆ ಉಪ ಸಭಾಧ್ಯಕ್ಷರೂ ಆಗಿರುವ ಶಾಸಕ ರುದ್ರಪ್ಪ ಲಮಾಣಿ ಗಾಯಗೊಂಡಿರುವ ಘಟನೆ ನಡೆದಿದೆ.

ಬೆಂಗಳೂರಿಂದ ಹಾವೇರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರಿಂದ ಕೆಳಗಿಳಿದು ನಿಂತಿದ್ದ ರುದ್ರಪ್ಪ ಲಮಾಣಿ ಅವರಿಗೆ ಬೈಕ್​ನಲ್ಲಿ ಬರುತ್ತಿದ್ದ ವ್ಯಕ್ತಿಯೊಬ್ಬರು ಡಿಕ್ಕಿ ಹೊಡೆದಿದ್ದಾರೆ.

ಡಿಕ್ಕಿ ರಭಸಕ್ಕೆ ನೆಲಕ್ಕೆ ಬಿದ್ದ ಪರಿಣಾಮ ರುದ್ರಪ್ಪ ಲಮಾಣಿ ಅವರ ಹಣೆ, ಹಲ್ಲು ಮತ್ತು ಬಲ ಮೊಣಕಾಲಿಗೆ ಗಾಯವಾಗಿದೆ.

ತಕ್ಷಣಕ್ಕೆ ಹಿರಿಯೂರಲ್ಲಿ ಚಿಕಿತ್ಸೆ ಪಡೆದ ಅವರು, ಬಳಿಕ ದಾವಣಗೆರೆ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ.ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ