ಬೆಂಗಳೂರು : ಆಯುರ್ವೇದ ವೈದ್ಯರಿಗೆ ಸರ್ಜರಿ ಮಾಡಲು ಅವಕಾಶ ನೀಡಿರುವುದನ್ನು ವಿರೋಧಿಸಿ ಖಾಸಗಿ ಆಸ್ಪತ್ರೆಗಳು ಮುಷ್ಕರಕ್ಕೆ ಕರೆ ಕೊಟ್ಟಿವೆ. ಹೀಗಾಗಿ ಖಾಸಗಿ ಆಸ್ಪತ್ರೆಯ ಓಪಿಡಿಗಳು ಬಂದ್ ಇರಲಿವೆ.
ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಓಪಿಡಿ ಸೇವೆ ಸ್ಥಗಿತಗೊಳ್ಳಲಿವೆ. ಆದರೆ ಎಮರ್ಜನ್ಸಿ ಸೇವೆ ಎಂದಿನಂತೆ ಇರಲಿದೆ. ಐಎಂಎ ನೀಡಿರುವ ಬಂದ್ ಕರೆಗೆ PHANA ಸೇರಿ ಹಲವು ಸಂಘಟನೆಗಳು ಸಾಥ್ ನೀಡಿವೆ.
ಕೇಂದ್ರ ಸರ್ಕಾರ ಆಯುರ್ವೇದ ಶಿಕ್ಷಣ ತಿದ್ದುಪಡಿ ನಿಯಮಾವಳಿ ಅಧಿಸೂಚನೆಯನ್ನ ಹಿಂಪಡೆಯುವಂತೆ ಒತ್ತಾಯಿಸಿ ಭಾರತೀಯ ವೈದ್ಯಕೀಯ ಸಂಘ ಪ್ರತಿಭಟನೆಗೆ ಕರೆ ನೀಡಿದೆ.
ಕೇಂದ್ರ ಸರ್ಕಾರದ ನೋಟಿಫಿಕೇಶನ್ಲ್ಲಿ ಈ ವರ್ಷದ ಪಿಜಿ ಕೋರ್ಸ್ಗಳಲ್ಲಿ 39 ಜನರಲ್ ಸರ್ಜರಿ ಮತ್ತು 19 ಸ್ಪೆಷಲ್ ಸರ್ಜರಿ ತರಬೇತಿಗೆ ಅವಕಾಶ ಮಾಡಿಕೊಟ್ಟಿದೆ.
Laxmi News 24×7