Breaking News

ಕಾರಿನ ಮೇಲೆ ಬಿದ್ದ ಕಾಂಕ್ರೀಟ್ ಮಿಕ್ಸರ್ ವಾಹನ

Spread the love

ಬೆಳಗಾವಿ: ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ವಾಹನ ಉರುಳಿ ಬಿದ್ದಿದೆ. ಕಾರಿನಲ್ಲಿದ್ದ ಇಬ್ಬರು ಪವಾಡ ಸದೃಶ ಎಂಬಂತೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಳಗಾವಿ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ರಸ್ತೆಯಲ್ಲಿ ನಡೆದಿದೆ.

ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಕ್ರೇನ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಹರಸಾಹಸಪಟ್ಟು ಕಾರಿನೊಳಗೆ ಸಿಲುಕಿದ್ದ ಇಬ್ಬರು ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಧಾರವಾಡ ಮೂಲದ ಪರಪ್ಪ ಬಾಳಿಕಾಯಿ, ನಿಂಗಪ್ಪ ಕೊಪ್ಪದ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆಕಾರಿನಲ್ಲಿ ಧಾರವಾಡದಿಂದ ಬೆಳಗಾವಿಗೆ ಈ ಇಬ್ಬರು ಬರುತ್ತಿದ್ದರು. ಸಂಬಂಧಿಗಳ ಆಗಮನಕ್ಕಾಗಿ ಸರ್ವೀಸ್ ರಸ್ತೆ ಬದಿ ಕಾರು ನಿಲ್ಲಿಸಿ ಕಾಯುತ್ತಿದ್ದರು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಂಕ್ರೀಟ್ ಮಿಕ್ಸರ್ ವಾಹ‌ನ ಕಾರಿನ ಮೇಲೆ ಉರುಳಿ ಬಿದ್ದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ