Breaking News

ಜಮೀನುಗಳಿಗೆ ನುಗ್ಗಿ ಬೆಳೆ ನೆಲಸಮಗೊಳಿಸಿದ ಕಾಡಾನೆಗಳು

Spread the love

ಹಾವೇರಿ : ಜಿಲ್ಲೆಯ ಶಿಗ್ಗಾಂವಿ ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರಿಗೆ ಇದೀಗ ಆನೆಗಳ ಕಾಟ ಶುರುವಾಗಿದೆ. ರೈತರ ಜಮೀನುಗಳಿಗೆ ನುಗ್ಗಿ ಸಾಕಷ್ಟು ಪ್ರಮಾಣದ ಬೆಳೆ ನಷ್ಟ ಮಾಡಿವೆ.

ವೀಳ್ಯದೆಲೆ, ಅಡಿಕೆ, ಬಾಳೆ ತೋಟಗಳತ್ತ ನುಗ್ಗಿ ಕಾಡಾನೆಗಳು ಬೆಳೆಗಳನ್ನು ನೆಲಸಮ ಮಾಡಿವೆ. ಇದರಿಂದಾಗಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಶಿಗ್ಗಾಂವಿ ಪಟ್ಟಣಕ್ಕೆ ನೀರು ಪೂರೈಸುವ ನಾಗನೂರು ಕೆರೆಯಲ್ಲಿ ಎರಡು ಕಾಡಾನೆಗಳು ಜಲಕ್ರೀಡೆಯಾಡಿರುವ ದೃಶ್ಯಗಳನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. ಹೀಗಾಗಿ, ಶಿಗ್ಗಾಂವಿ ಪಟ್ಟಣದ ಜನ ಆತಂಕಕ್ಕೊಳಗಾಗಿದ್ದಾರೆ.ಆನೆಗಳು ನಾಡಿಗೆ ಬಂದಿದ್ದು ಸುತ್ತಮುತ್ತಲಿನ ಗ್ರಾಮಸ್ಥರು ಮುಂಜಾಗ್ರತೆ ವಹಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ. ಆನೆಗಳು ಕಂಡರೆ ಅವುಗಳ ಫೋಟೋ, ವಿಡಿಯೋ ತೆಗೆಯಲು ಮುಂದಾಗದಂತೆ ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ