ಬೆಳಗಾವಿ : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಅರ್ಥ ಇಲ್ಲ. ಜನರನ್ನು ತೃಪ್ತಿ ಪಡಿಸಲು ಘೋಷಣೆ ಮಾಡಿದ್ದರು. ಆದರೆ, ಅವು ಯಾವೂ ಕಾರ್ಯರೂಪಕ್ಕೆ ಬರುತ್ತಿಲ್ಲ. ಒಂದು ರೀತಿ ತುಘಲಕ್ ದರ್ಬಾರ್ ನಡೆಯುತ್ತಿದೆ. ಎಷ್ಟು ದಿವಸ ಮಾಡ್ತಾರೆ ಮಾಡಲಿ ಎನ್ನುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದರು.
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಅವರು ಮಾತನಾಡಿದರು. ಬೆಳಗಾವಿಗೆ ವಿಶೇಷವಾದ ಕಾರ್ಯಕ್ರಮಕ್ಕೆ ಬಂದಿದ್ದೇನೆ. ನಾವೆಲ್ಲಾ ಕುಟುಂಬದವರು ಹೋಗುತ್ತಿದ್ದೇವೆ. ಮಧ್ಯಾಹ್ನದ ಮೇಲೆ ಬೆಂಗಳೂರಿಗೆ ವಾಪಸ್ ಹೋಗುತ್ತೇವೆ. ಸದ್ಯಕ್ಕೆ ವಾತಾವರಣ ಬಿಜೆಪಿ ಪರವಾಗಿ ತುಂಬಾ ಚೆನ್ನಾಗಿದೆ. ಬರುವ ದಿನಗಳಲ್ಲಿ ನೂರಕ್ಕೆ ನೂರು ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎನ್ನುವ ವಿಶ್ವಾಸವಿದೆ. ಆ ದಿಕ್ಕಿನಲ್ಲಿ ನಾವೆಲ್ಲಾ ಒಟ್ಟಾಗಿ ಸೇರಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ನಿಮ್ಮ ಬಿಜೆಪಿ ನಾಯಕರಿಗೆ ಏನಾದರೂ ಸಲಹೆ ಕೊಡುತ್ತೀರಾ? ಎಂಬ ಮಾಧ್ಯಮದವರ ಪ್ರಶ್ನೆಗೆ, ಸಲಹೆ ಕೊಡುವ ಪ್ರಶ್ನೆಯೇ ಇಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡುವುದಷ್ಟೇ ಎಂದು ಯಡಿಯೂರಪ್ಪ ಉತ್ತರಿಸಿದರು.
Laxmi News 24×7