Breaking News

ಪೆನ್ನಾರ್ ನದಿ ನೀರು ವಿವಾದ ಕುರಿತು ಚರ್ಚೆಗೆ ದೆಹಲಿ ಭೇಟಿ: ಡಿಸಿಎಂ ಡಿ.ಕೆ.ಶಿವಕುಮಾರ್

Spread the love

ಬೆಂಗಳೂರು: “ಪೆನ್ನಾರ್ ನದಿ ನೀರು ಹಾಗೂ ಕೋಲಾರ ಭಾಗದಿಂದ ತಮಿಳುನಾಡು ಕಡೆಗೆ ಹರಿಯುವ ನೀರಿನ ವಿವಾದದ ಕುರಿತು ಕೇಂದ್ರ ಜಲಶಕ್ತಿ ಸಚಿವರ ಜೊತೆ ಚರ್ಚೆ ನಡೆಸಲು ದೆಹಲಿಗೆ ಭೇಟಿ ನೀಡುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ಪೆನ್ನಾರ್ ನದಿ ನೀರಿನ ವಿಚಾರವಾಗಿ ಎರಡು ರಾಜ್ಯಗಳ ಪ್ರತಿನಿಧಿಗಳನ್ನು ಸೇರಿಸಿ ನಿಮ್ಮಲ್ಲೇ ಚರ್ಚೆ ನಡೆಸಿ ಬಗೆಹರಿಸಿಕೊಳ್ಳಿ ಎನ್ನುವ ಸುಪ್ರೀಂ ಕೋರ್ಟ್ ನಿರ್ದೇಶನವಿತ್ತು. ಆದರೆ ಸೋಮವಾರ ರಾತ್ರಿ ತಮಿಳುನಾಡಿನ ಪ್ರತಿನಿಧಿಗಳು ಬರುವುದಿಲ್ಲ, ಅವರು ಪ್ರತ್ಯೇಕವಾಗಿ ಮನವಿ ಸಲ್ಲಿಸುತ್ತಾರೆ ಎನ್ನುವ ಸಂದೇಶವಿದೆ. ಅಲ್ಲಿಗೆ ಹೋದಾಗ ಇದರ ಸತ್ಯಾಸತ್ಯತೆ ತಿಳಿಯುತ್ತದೆ. ಆದರೆ ನಾನು ಆಹ್ವಾನವನ್ನು ತಿರಸ್ಕರಿಸಬಾರದು ಎಂದು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. ಜೊತೆಗೆ ಇತರೆ ಇಲಾಖೆಗಳ ಸಚಿವರು, ಅರಣ್ಯ ಇಲಾಖೆಯ ಸಚಿವರನ್ನು ಸಮಯ ಸಿಕ್ಕರೆ ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ” ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ