ಮಂಡ್ಯ: ಪತ್ನಿ ಶೀಲ ಶಂಕಿಸುತ್ತಿದ್ದ ಪತಿಯನ್ನು ಆತನ ಮಗನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.ಜಿಲ್ಲೆಯ ಪಾಂಡವಪುರ ತಾಲೂಕಿನ ರಾಗಿಮುದ್ದನಹಳ್ಳಿಯಲ್ಲಿ ಘಟನೆ ನಡೆದಿದ್ದು, 44 ವರ್ಷದ ದೇವರಾಜುನನ್ನು ಆತನ ಮಗ ಕೊಲೆ ಮಾಡಿದ್ದಾನೆ. ಕೂಲಿ ಮಾಡಿ ಬದುಕುತ್ತಿದ್ದ ಬಡ ಕುಟುಂಬದಲ್ಲಿ ಇದ್ದದ್ದು ಪತಿ, ಪತ್ನಿ ಹಾಗೂ ಒಬ್ಬನೇ ಮಗ. ಈ ನಡುವೆ ಮನೆಯ ಯಜಮಾನ ಎನಿಸಿಕೊಂಡ ಪತಿಗೆ ಪತ್ನಿ ನಡತೆ ಬಗ್ಗೆ ಅನುಮಾನ ಶುರುವಾಗಿತ್ತು. ಈ ವಿಚಾರಕ್ಕೆ ಮನೆಯಲ್ಲಿ ನಿತ್ಯ ಜಗಳ, ರಂಪಾಟವಾಗುತ್ತಿತ್ತು. ಇದರಿಂದ ಬೇಸತ್ತ ಮಗ, ತಂದೆಯನ್ನೇ ಕೊಂದಿದ್ದಾನೆ.
ದೇವರಾಜು 20 ವರ್ಷಗಳ ಹಿಂದೆ ಸಾವಿತ್ರಮ್ಮಳನ್ನು ವಿವಾಹವಾಗಿದ್ದ. ಈ ದಂಪತಿಗೆ ಅಪ್ಪು ಎಂಬ 19 ವರ್ಷದ ಮಗನೂ ಇದ್ದ. ಗ್ರಾಮದಲ್ಲಿ ಕೂಲಿ ಮಾಡಿಕೊಂಡು ಬದುಕು ಸಾಗಿಸುತ್ತಿದ್ದ ದಂಪತಿಗೆ, ಮಗ ಗೂಡ್ಸ್ ಆಟೋ ಓಡಿಸಿಕೊಂಡು ನೆರವಾಗಿದ್ದ. ಹೀಗಿರುವಾಗಲೇ ಇತ್ತೀಚೆಗೆ ಪತ್ನಿ ಸಾವಿತ್ರಮ್ಮಳ ನಡವಳಿಕೆ ಬಗ್ಗೆ ದೇವರಾಜುಗೆ ಅನುಮಾನ ಶುರುವಾಗಿತ್ತು. ಇದೇ ವಿಚಾರಕ್ಕೆ ಇಬ್ಬರ ನಡುವೆ ಆಗಾಗ್ಗೆ ಜಗಳವೂ ನಡೆಯುತ್ತಿತ್ತು.
Laxmi News 24×7