Breaking News

ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ…ಆಗಿದ್ದೇನು?

Spread the love

ಶಿವಮೊಗ್ಗ, (ಮಾರ್ಚ್ 18): ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡಲು ನ್ಯಾಯಾಲ ಆದೇಶ ನೀಡಿದರೂ ಸಹ ಕೆಎಸ್​ಆರ್​ಟಿಸಿ ಕ್ಯಾರೇ ಎಂದಿಲ್ಲ. ಹೀಗಾಗಿ ಆಕ್ರೋಶಗೊಂಡ ಕೋರ್ಟ್, ಬಸ್​ ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ. ಅದರಂತೆ ಕೆಎಸ್ ಆರ್ ಟಿಸಿಯ ಶಿರಸಿ ಡಿಪೋದ ಕೆಎಸ್​ಆರ್​ಟಿಸಿ ಬಸನ್ನು ತಂದು ಕೋರ್ಟ್​ ಆವರಣದಲ್ಲಿ ನಿಲ್ಲಿಸಲಾಗಿದೆ.

2022ರ ಜುಲೈ 7 ರಂದು ಪತ್ರಿಕೆ ಹಂಚಲು ಹೋಗಿದ್ದ ಗಣೇಶ್ ಎನ್ನುವಾತನಿಗೆ ಸಾಗರದ ಪ್ರವಾಸಿ ಮಂದಿರದ ಎದುರು ಶಿರಸಿ ಡಿಪೋದ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಗಣೇಶ್ ಮೃತಪಟ್ಟಿದ್ದ. ಇದರಿಂದ ಪರಿಹಾರ ಕೊಡಿಸುವಂತೆ ಮೃತರ ಕುಟುಂಬಸ್ಥರು ಗರದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಗಣೇಶ್ ಅವರ ಪೋಷಕರಿಗೆ ಮೂರು ತಿಂಗಳೊಳಗೆ ಪರಿಹಾರ ನೀಡುವಂತೆ 2024 ರ ಜುಲೈ 8 ರಂದು ನ್ಯಾಯಾಲಯ ಆದೇಶಿಸಿತ್ತು. ಆದ್ರೆ, ಇದುವರೆಗೂ ಕೆಎಸ್​ಆರ್​ಟಿಸಿ ಯಾವುದೇ ಪರಿಹಾರ ನೀಡಿಲ್ಲ. ಹೀಗಾಗಿ ಮೃತ ಗಣೇಶನ ತಾಯಿ ಉಮಾ ಅವರು ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ